ADVERTISEMENT

IND vs AUS | 407 ರನ್‌ಗಳ ಬೃಹತ್‌ ಮುನ್ನಡೆ ಸಾಧಿಸಿದ ಆಸ್ಟ್ರೇಲಿಯಾ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 4:44 IST
Last Updated 10 ಜನವರಿ 2021, 4:44 IST
ರೋಹಿತ್‌ ಶರ್ಮಾ ಅವರ ಬ್ಯಾಟಿಂಗ್‌ ವೈಖರಿ –ಎಎಫ್‌ಪಿ ಚಿತ್ರ
ರೋಹಿತ್‌ ಶರ್ಮಾ ಅವರ ಬ್ಯಾಟಿಂಗ್‌ ವೈಖರಿ –ಎಎಫ್‌ಪಿ ಚಿತ್ರ   

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ (ಎಸ್‌ಸಿಜಿ) ಭಾರತದ ಎದುರು ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ 407 ರನ್‌ಗಳ ಭಾರೀ ಮುನ್ನಡೆ ಸಾಧಿಸಿದ್ದು, ಇನ್ನಿಂಗ್ಸ್‌ ಡಿಕ್ಲೇರ್ ಮಾಡಿಕೊಂಡಿದೆ.

ಮಾರ್ನಸ್ ಲಾಬುಷೇನ್ (73), ಸ್ಟೀವನ್ ಸ್ಮಿತ್ (81),ಕ್ಯಾಮರಾನ್ ಗ್ರೀನ್ (84) ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಭಾರತದ ಪರ ನವದೀಪ್‌ ಸೈನಿ 2, ಆರ್‌.ಅಶ್ವಿನ್‌ 2, ಬೂಮ್ರಾ ಹಾಗೂ ಸಿರಾಜ್‌ ತಲಾ ಒಂದು ವಿಕೆಟ್‌ ಪಡೆದರು.

ADVERTISEMENT

ಸದ್ಯ ಎರಡನೇ ಇನ್ನಿಂಗ್ಸ್‌ ಆರಂಭಿಸಿರುವ ಭಾರತ 2 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 4 ರನ್‌ ಗಳಿಸಿದೆ. (ರೋಹಿತ್‌ ಶರ್ಮಾ 3*, ಶುಭಮನ್‌ ಗಿಲ್‌ 1*)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.