ADVERTISEMENT

IND vs AUS T20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಏಜೆನ್ಸೀಸ್
Published 8 ಡಿಸೆಂಬರ್ 2020, 12:09 IST
Last Updated 8 ಡಿಸೆಂಬರ್ 2020, 12:09 IST
ಟೀಮ್ ಇಂಡಿಯಾ
ಟೀಮ್ ಇಂಡಿಯಾ   

ಸಿಡ್ನಿ: ಮಂಗಳವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಸ್‌ಸಿಜಿ) ಮೈದಾನದಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಸಾಗುತ್ತಿರುವ ಮೂರನೇ ಹಾಗೂ ಅಂತಿಮ ಟ್ವೆಂಟಿ-20 ಅಂತರ ರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಫಿಂಚ್ ಕಮ್‌ಬ್ಯಾಕ್
ಗಾಯದಿಂದ ಚೇತರಿಸಿಕೊಂಡಿರುವ ಆಸ್ಟ್ರೇಲಿಯಾ ನಾಯಕ ಆ್ಯರನ್ ಫಿಂಚ್ ತಂಡಕ್ಕೆ ಪುನರಾಗಮನ ಮಾಡಿದ್ದಾರೆ. ಗಾಯದ ಹಿನ್ನೆಲೆಯಲ್ಲಿ ಫಿಂಚ್ ದ್ವಿತೀಯ ಪಂದ್ಯಕ್ಕೆ ಅಲಭ್ಯವಾಗಿದ್ದರು.ಇವರಿಗೆ ಮಾರ್ಕಸ್ ಸ್ಟೋಯಿನಿಸ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇನ್ನುಳಿದಂತೆ ಆಸೀಸ್ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಆಡುವ ಬಳಗ ಇಂತಿದೆ:

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ಕೆ.ಎಲ್‌.ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್‌), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ದೀಪಕ್ ಚಾಹರ್‌, ಟಿ.ನಟರಾಜನ್‌, ಶಾರ್ದೂಲ್ ಠಾಕೂರ್.

ಆಸ್ಟ್ರೇಲಿಯಾ: ಆ್ಯರನ್ ಫಿಂಚ್ (ನಾಯಕ), ಮ್ಯಾಥ್ಯೂ ವೇಡ್ (ನಾಯಕ), ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್‌, ಡಾರ್ಸಿ ಶಾರ್ಟ್‌, ಮೊಯಿಸಸ್ ಹೆನ್ರಿಕ್ಸ್, ಡ್ಯಾನಿಯಲ್ ಸ್ಯಾಮ್ಸ್‌, ಸೀನ್ ಅಬಾಟ್‌, ಮಿಷೆಲ್ ಸ್ವೆಪ್ಸನ್‌, ಆ್ಯಂಡ್ರ್ಯೂ ಟೈ ಮತ್ತು ಆ್ಯಡಂ ಜಂಪಾ.

ಈ ಮೊದಲು ಮೊದಲೆರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮೂರು ಪಂದ್ಯಗಳ ಟಿ20 ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಈ ಮೂಲಕ ಏಕದಿನ ಸರಣಿಯಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.

ನಂ.2 ಅವಕಾಶ
ಅಂತಿಮ ಪಂದ್ಯದಲ್ಲೂ ವಿಜಯ ದಾಖಲಿಸಿದರೆ ಭಾರತ ತಂಡವು ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆತ ಕಾಣಲಿದೆ. ಪ್ರಸ್ತುತ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನಗಳನ್ನು ಹಂಚಿಕೊಂಡಿದೆ.

ಇದನ್ನೂ ಓದಿ:

ಇದುವರೆಗಿನ ಫಲಿಶಾಂಶಗಳು:
ಮೊದಲ ಟಿ20: ಭಾರತಕ್ಕೆ 11 ರನ್ ಅಂತರದ ಗೆಲುವು
ದ್ವಿತೀಯ ಟಿ20: ಭಾರತಕ್ಕೆ ಆರು ವಿಕೆಟ್ ಅಂತರದ ಗೆಲುವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.