ADVERTISEMENT

ಹಿಟ್‌ಮ್ಯಾನ್‌ ರೋಹಿತ್‌ 25ನೇ ಶತಕ; ವಿಶ್ವಕಪ್‌ನಲ್ಲಿ 3ನೇ ಬಾರಿ 100

ವಿಶ್ವಕಪ್‌ ಕ್ರಿಕೆಟ್‌

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 17:17 IST
Last Updated 30 ಜೂನ್ 2019, 17:17 IST
   

ಬರ್ಮಿಂಗಂ: ಭಾನುವಾರ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್‌ ಶರ್ಮಾ ಶತಕ ಪೂರೈಸುವ ಮೂಲಕ 25ನೇ ಏಕದಿನ ದಾಖಲಿಸಿದರು.

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ರೋಹಿತ್‌ ಸಿಡಿಸಿದ ಮೂರನೇ ಶತಕ ಇದಾಗಿದ್ದು, ವಿಶ್ವಕಪ್‌ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಕ್ಷಣಕ್ಷಣದ ಸ್ಕೋರ್‌:https://bit.ly/2Nne4p6

ADVERTISEMENT

ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ 2003ರ ವಿಶ್ವಕಪ್‌ ಟೂರ್ನಿಯಲ್ಲಿ ಮೂರು ಶತಕ ಗಳಿಸಿದ ದಾಖಲೆ ಹೊಂದಿದ್ದಾರೆ.

ರೋಹಿತ್‌ ಶರ್ಮಾ ದಕ್ಷಿಣ ಆಫ್ರಿಕಾ ಎದುರು 122, ಪಾಕಿಸ್ತಾನದ ಎದುರು 140 ಹಾಗೂ ಇಂಗ್ಲೆಂಡ್‌ ವಿರುದ್ಧ 102 ರನ್‌ ದಾಖಲಿಸಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಶತಕ ಗಳಿಸಿರುವ ಎರಡನೇ ಭಾರತೀಯ ಆಟಗಾರ ಎಂದೂ ದಾಖಲಾಗಿದೆ. 2011ರ ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ ಎದುರು ಸಚಿನ್‌ ಶತಕ ಸಿಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.