ADVERTISEMENT

IND vs ENG | ಬೌಲಿಂಗ್‌ ಆಯ್ದುಕೊಂಡ ಇಂಗ್ಲೆಂಡ್;‌ ಉತ್ತಮ ಆರಂಭ ಪಡೆದ ಭಾರತ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2021, 9:48 IST
Last Updated 23 ಮಾರ್ಚ್ 2021, 9:48 IST
ಟಾಸ್‌ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಇಂಗ್ಲೆಂಡ್‌ ನಾಯಕ ಎಯಾನ್‌ ಮಾರ್ಗನ್‌ (ಪಿಟಿಐ ಚಿತ್ರ)
ಟಾಸ್‌ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ಇಂಗ್ಲೆಂಡ್‌ ನಾಯಕ ಎಯಾನ್‌ ಮಾರ್ಗನ್‌ (ಪಿಟಿಐ ಚಿತ್ರ)   

ಪುಣೆ: ಆತಿಥೇಯ ಭಾರತ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಇಂಗ್ಲೆಂಡ್‌ ತಂಡದ ನಾಯಕ ಎಯಾನ್‌ ಮಾರ್ಗನ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಬ್ಯಾಟಿಂಗ್‌ ಆರಂಭಿಸಿರುವ‌ ಟೀಂ ಇಂಡಿಯಾ 10ಓವರ್‌ಗಳ ಮುಕ್ತಾಯಕ್ಕೆ ವಿಕೆಟ್‌ ನಷ್ಟವಿಲ್ಲದೆ 39 ರನ್‌ ಗಳಿಸಿದೆ.

ಉಪನಾಯಕ ರೋಹಿತ್‌ ಶರ್ಮಾ ಮತ್ತು ಅನುಭವಿ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ರಕ್ಷಣಾತ್ಮಕ ಆಟದ ಮೊರೆಹೋಗಿದ್ದು ಕ್ರಮವಾಗಿ 19 (27) ಮತ್ತು 20 (33) ರನ್‌ ಗಳಿಸಿದ್ದಾರೆ.

ವಿರಾಟ್‌ ಕೊಹ್ಲಿ ನಾಯಕತ್ವದ ಭಾರತ ತಂಡವುನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು3-1ರಿಂದ ಹಾಗೂ5 ಪಂದ್ಯಗಳ ಟಿ20 ಸರಣಿಯನ್ನು 3-2ರಿಂದ ಗೆದ್ದುಕೊಂಡಿತ್ತು. ಹೀಗಾಗಿ ಏಕದಿನ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಪಡೆಗೆ ಈ ಸರಣಿಯು ಪ್ರತಿಷ್ಠೆಯಾಗಿದೆ.

ADVERTISEMENT

ಟಿ20 ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಕನ್ನಡಿಗ ಕೆಎಲ್‌ ರಾಹುಲ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ನೀಡಲಾಗಿದೆ. ಅಲ್ಲದೆ, ಮತ್ತೊಬ್ಬ ಕನ್ನಡಿಗ ಪ್ರಸಿದ್ಧ ಕೃಷ್ಣ ಹಾಗೂ ಕೃಣಾಲ್‌ ಪಾಂಡ್ಯ ಅವರು ಈ ಪಂದ್ಯದ ಮೂಲಕ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.