ADVERTISEMENT

IND vs ENG Test: ಶತಕದ ಹೊಸ್ತಿಲಲ್ಲಿ ರೂಟ್; ಸವಾಲಿನ ಮೊತ್ತದತ್ತ ಇಂಗ್ಲೆಂಡ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಆಗಸ್ಟ್ 2021, 15:23 IST
Last Updated 7 ಆಗಸ್ಟ್ 2021, 15:23 IST
ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌
ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌   

ನಾಟಿಂಗ್‌ಹ್ಯಾಂ:95 ರನ್‌ಗಳ ಹಿನ್ನಡೆಯೊಂದಿಗೆಎರಡನೇ ಇನಿಂಗ್ಸ್‌ ಆರಂಭಿಸಿರುವ ಆತಿಥೇಯ ಇಂಗ್ಲೆಂಡ್‌ ತಂಡದ ನಾಯಕ ಜೋ ರೂಟ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ 140 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ಆಯ್ದುಕೊಂಡಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲ್ಲಿ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡು 183 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ಭಾರತ 278 ರನ್‌ಗಳಿಗೆ ಆಲೌಟ್‌ ಆಗಿತ್ತು.

ಎರಡನೇ ಇನಿಂಗ್ಸ್‌ ಆರಂಭಿಸಿದ ರೂಟ್‌ ಪಡೆ46 ರನ್‌ಆಗುವಷ್ಟರಲ್ಲಿ 2 ವಿಕೆಟ್‌ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಆತಂಕದಲ್ಲಿತ್ತು. ಆದರೆ,ಮೂರನೇ ವಿಕೆಟ್‌ಗೆ ಜೊತೆಯಾದ ರೂಟ್‌ ಮತ್ತು ಡಾಮಿನಿಕ್‌ ಸಿಬ್ಲಿ 89 ರನ್‌ ಸೇರಿಸಿ ಚೇತರಿಕೆ ನೀಡಿದರು. ಸಿಬ್ಲಿ28 ರನ್‌ ಗಳಿಸಿ ಔಟಾದರು. ನಂತರ ಬಂದ ಜಾನಿ ಬೈರ್ಸ್ಟ್ರೋವ್‌ (30) ಮತ್ತು ಡೆನಿಯಲ್‌ ಲಾರೆನ್ಸ್‌ (25) ನಾಯಕನ ಜೊತೆಗೂಡಿ ಕೆಲಕಾಲ ಇನಿಂಗ್ಸ್‌ ಬೆಳೆಸುವ ಪ್ರಯತ್ನ ಮಾಡಿದರು.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಗಟ್ಟಿಯಾಗಿ ನಿಂತು ಆಡುತ್ತಿರುವ ರೂಟ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ ತಮ್ಮ21ನೇ ಶತಕದ ಹೊಸ್ತಿಲಲ್ಲಿದ್ದಾರೆ.138ಎಸೆತಗಳನ್ನು ಎದುರಿಸಿದ ಅವರು13 ಬೌಂಡರಿ ಸಹಿತ 96 ರನ್‌ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಇನ್ನೊಂದು ತುದಿಯಲ್ಲಿ ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಜಾಸ್‌ ಬಟ್ಲರ್‌ (15) ಆಡುತ್ತಿದ್ದಾರೆ.

ರೂಟ್‌ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಆಂಗ್ಲ ಪಡೆ ನಾಲ್ಕನೇ ದಿನಚಹಾ ವಿರಾಮದ ವೇಳೆಗೆ 5 ವಿಕೆಟ್‌ಗಳನ್ನು ಕಳೆದುಕೊಂಡು 235 ರನ್‌ ಗಳಿಸಿದೆ. ಭಾರತ ಪರ‌ ಜಸ್‌ಪ್ರೀತ್‌ ಬೂಮ್ರಾ ಹಾಗೂ ಮೊಹಮ್ಮದ್‌ ಸಿರಾಜ್‌ ತಲಾ ಎರಡು ವಿಕೆಟ್‌ ಉರುಳಿಸಿದ್ದು, ಇನ್ನೊಂದು ವಿಕೆಟ್‌ ಶಾರ್ದೂಲ್‌ ಠಾಕೂರ್‌ ಪಾಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.