ಚೆನ್ನೈ: ಇಂಗ್ಲೆಂಡ್ ವಿರುದ್ಧದ ಎರಡನೇ ಟಿ–20 ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತು.
ಚೆಪಾಕ್‌ನಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಭಾರತ ಈ ಗೆಲುವು ದಾಖಲಿಸಿತು. ಭಾರತದ ಪರ ತಿಲಕ್ ವರ್ಮಾ ಅವರು 72 ರನ್ ಹೊಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣರಾದರು. ವಾಷಿಂಗ್ಟನ್ ಸುಂದರ್ ಕೂಡ 26 ರನ್ ಗಳಿಸಿ ಗಮನ ಸೆಳೆದರು.
ಟಾಸ್ ಗೆದ್ದ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲ ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಪೇರಿಸಿತು.
ಭಾರತ 8 ವಿಕೆಟ್ ಕಳೆದುಕೊಂಡು ಜಯ ಸಾದಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.