ADVERTISEMENT

Ind vs Eng ಮೊದಲ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 10:41 IST
Last Updated 4 ಆಗಸ್ಟ್ 2021, 10:41 IST
ಇಂಗ್ಲೆಂಡ್‌ನ ರೋರಿ ಬರ್ನ್ಸ್ ವಿಕೆಟ್ ಪಡೆದ ಸಂಭ್ರಮದಲ್ಲಿ ಬೂಮ್ರಾ_ ಎಎಫ್‌ಪಿ ಚಿತ್ರ
ಇಂಗ್ಲೆಂಡ್‌ನ ರೋರಿ ಬರ್ನ್ಸ್ ವಿಕೆಟ್ ಪಡೆದ ಸಂಭ್ರಮದಲ್ಲಿ ಬೂಮ್ರಾ_ ಎಎಫ್‌ಪಿ ಚಿತ್ರ    

ನಾಟಿಂಗ್‌ಹ್ಯಾಂ: ಭಾರತ–ಇಂಗ್ಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಗಾಯಗೊಂಡಿರುವ ಶುಭಮನ್ ಗಿಲ್ ಬದಲಿಗೆ ಕೆ.ಎಲ್. ರಾಹುಲ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದು, ಪಂದ್ಯಕ್ಕೆ ಎರಡು ದಿನಗಳ ಮೊದಲು ಮಯಂಕ್ ಅಗರ್ವಾಲ್ ಸಹ ಅಭ್ಯಾಸದ ವೇಳೆ ತಲೆಗೆ ಪೆಟ್ಟು ತಿಂದು ಹೊರಗುಳಿದಿದ್ದರು. ರವಿಚಂದ್ರನ್ ಅಶ್ವಿನ್ ಹೊರಗುಳಿದಿದ್ದು, ಭಾರತವು ಏಕೈಕ ಸ್ಪಿನ್ನರ್ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿಕೊಂಡಿದೆ.ವೇಗಿಇಶಾಂತ್ ಶರ್ಮಾ ಅವರನ್ನು ಸಹ ತಂಡಕ್ಕೆ ಸೇರಿಸಿಕೊಳ್ಳಲಾಗಿಲ್ಲ. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ಚೆತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್ , ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್ ಬೂಮ್ರಾ ‌ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ADVERTISEMENT

ಇಂಗ್ಲೆಂಡ್ ತಂಡ: ರೋರಿ ಬರ್ನ್ಸ್, ಡೊಮ್ ಸಿಬ್ಲೆ, ಜಾಕ್ ಕ್ರಾಲಿ, ಜೋ ರೂಟ್, ಜಾನಿ ಬೆಸ್ಟೊ, ಡಾನ್ ಲಾರೆನ್ಸ್, ಜೋಸ್ ಬಟ್ಲರ್ , ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಅಂಡರ್ಸನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.