ADVERTISEMENT

IND vs IRE: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಪದಾರ್ಪಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜೂನ್ 2022, 16:15 IST
Last Updated 26 ಜೂನ್ 2022, 16:15 IST
ಉಮ್ರಾನ್ ಮಲಿಕ್
ಉಮ್ರಾನ್ ಮಲಿಕ್   

ಡಬ್ಲಿನ್: ಪ್ರವಾಸಿ ಭಾರತ ಹಾಗೂ ಐರ್ಲೆಂಡ್ ನಡುವಣ ಮೊದಲ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮಳೆ ಅಡಚಣೆಯಾಗಿದೆ.

ಈ ಮುನ್ನ ಡಬ್ಲಿನ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಉಮ್ರಾನ್ ಮಲಿಕ್ ಪದಾರ್ಪಣೆ...
ಬಲಗೈ ಉದಯೋನ್ಮುಖ ವೇಗದ ಬೌಲರ್ ಉಮ್ರಾನ್ ಮಲಿಕ್‌ಗೆ ಚೊಚ್ಚಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡುವ ಅದೃಷ್ಟ ಒಲಿದು ಬಂದಿದೆ.

ADVERTISEMENT

ಇತ್ತೀಚೆಗಷ್ಟೇ ಅಂತ್ಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಉಮ್ರಾನ್, ಅತಿ ವೇಗದ ಬೌಲಿಂಗ್‌ನಿಂದ ಮೋಡಿ ಮಾಡಿದ್ದರು.

ಸಂಜುಗಿಲ್ಲ ಅವಕಾಶ...
ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಳಿಸುವಲ್ಲಿ ಸಂಜು ಸ್ಯಾಮ್ಸನ್ ವಿಫಲರಾಗಿದ್ದಾರೆ. ಈ ನಡುವೆ ದೀಪಕ್ ಹೂಡಾ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಋತುರಾಜ್ ಗಾಯಕವಾಡ್ ಹಾಗೂ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸೂರ್ಯ ಕುಮಾರ್ ಯಾದವ್, ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಫಿನಿಶರ್ ದಿನೇಶ್ ಕಾರ್ತಿಕ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ಅಕ್ಷರ್ ಪಟೇಲ್ ಹಾಗೂ ಯಜುವೇಂದ್ರ ಚಾಹಲ್ ಸ್ಪಿನ್ ಬೌಲಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದು, ಭುವನೇಶ್ವರ್ ಕುಮಾರ್ ಹಾಗೂ ಆವೇಶ್ ಖಾನ್ ವೇಗದ ಬೌಲರ್‌ಗಳಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.