ಸಿಡ್ನಿ: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಎರಡನೇ ಪಂದ್ಯದಲ್ಲಿ ಭಾರತ ತಂಡ ನೆದರ್ಲೆಂಡ್ಸ್ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್‌ಗಳನ್ನು ಕಳೆದುಕೊಂಡು 179 ರನ್ ಕಲೆಹಾಕಿದೆ.
ಇಲ್ಲಿನ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದಭಾರತ ತಂಡ ಆರಂಭಿಕ ಆಘಾತ ಎದುರಿಸಿತು. ಆರಂಭಿಕ ಆಟಗಾರ ಕೆ.ಎಲ್ ರಾಹುಲ್ 9 ರನ್ ಗಳಿಸಿ ವ್ಯಾನ್ ಮೀಕರನ್‌ಗೆ ವಿಕೆಟ್ ಒಪ್ಪಿಸಿದರು.
ಶರ್ಮಾ, ಕೊಹ್ಲಿ– ಯಾದವ್ ಭರ್ಜರಿ ಬ್ಯಾಟಿಂಗ್
ಈ ಹಂತದಲ್ಲಿ ಜೊತೆಯಾದ ನಾಯಕ ರೋಹಿತ್ ಶರ್ಮಾ –ವಿರಾಟ್ ಕೊಹ್ಲಿ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದರು. ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಗಳಿಸಿ ಕ್ಲಾಸೆನ್‌ಗೆ ಔಟ್ ಆದರು. ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್, ಕೊಹ್ಲಿಗೆ ಸಾಥ್ ನೀಡುವಲ್ಲಿ ಯಶಸ್ವಿಯಾದರು. ಕೊಹ್ಲಿ 44 ಎಸೆತಗಳಲ್ಲಿ 62 ರನ್ ಗಳಿಸಿದರೆ, ಯಾದವ್ 25 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್ ಸಹಿತ 51 ರನ್ ಕಲೆಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.