ADVERTISEMENT

IND vs NZ T20I | ನ್ಯೂಜಿಲೆಂಡ್‌ ವಿರುದ್ಧ ಟಾಸ್‌ ಗೆದ್ದ ಭಾರತ, ಬೌಲಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜನವರಿ 2023, 13:59 IST
Last Updated 27 ಜನವರಿ 2023, 13:59 IST
ಟ್ರೋಫಿಯೊಂದಿಗೆ ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟನರ್
ಟ್ರೋಫಿಯೊಂದಿಗೆ ಹಾರ್ದಿಕ್ ಪಾಂಡ್ಯ ಮತ್ತು ಮಿಚೆಲ್ ಸ್ಯಾಂಟನರ್   

ರಾಂಚಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಏಕದಿನ ಕ್ರಿಕೆಟ್ ಸರಣಿಯಲ್ಲಿ ಭರ್ಜರಿ ಜಯ ಸಾಧಿಸಿದ ಸಂಭ್ರಮದಲ್ಲಿರುವ ಭಾರತ ತಂಡವು ನ್ಯೂಜಿಲೆಂಡ್‌ ಎದುರಿನ ಟಿ20 ಸರಣಿಯಲ್ಲಿ ಕಣಕ್ಕಿಳಿದಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಯುವ ಆಟಗಾರರು ತಮ್ಮ ಸಾಮರ್ಥ್ಯ ಮೆರೆಯಲು ತುದಿಗಾಲಿನಲ್ಲಿ ನಿಂತಿದ್ದಾರೆ. ಮುಂದಿನ ತಿಂಗಳು ಆಸ್ಟ್ರೇಲಿಯಾ ತಂಡವು ಭಾರತದಲ್ಲಿ ಟೆಸ್ಟ್ ಸರಣಿ ಆಡಲಿದೆ. ಫೆ 2ರಿಂದ ನಾಗಪುರದಲ್ಲಿ ಭಾರತ ತಂಡದ ಶಿಬಿರ ಆರಂಭವಾಗಲಿದೆ. ಅದರಿಂದಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ADVERTISEMENT

ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ಸ್ಪಿನ್ನರ್ ಕುಲದೀಪ್ ಯಾದವ್ ಟಿ20 ಸರಣಿಯಲ್ಲಿ ಆಡಿ ನಂತರ ಶಿಬಿರಕ್ಕೆ ಹೋಗಲಿದ್ದಾರೆ. ಏಕದಿನ ಸರಣಿಯಲ್ಲಿ ಒಂದು ದ್ವಿಶತಕ ಹಾಗೂ ಒಂದು ಶತಕ ಹೊಡೆದು ದಾಖಲೆ ಬರೆದಿರುವ ಗಿಲ್ ಮತ್ತು ಐಸಿಸಿ ವರ್ಷದ ಆಟಗಾರ ಗೌರವ ಗಳಿಸಿರುವ ಸೂರ್ಯಕುಮಾರ್ ಕಿವೀಸ್ ಬೌಲಿಂಗ್ ಪಡೆಗೆ ಪ್ರಮುಖ ಸವಾಲಾಗುವ ನಿರೀಕ್ಷೆ ಇದೆ. ಇಶಾನ್ ಕಿಶನ್, ಹಾರ್ದಿಕ್ ಮತ್ತು ದೀಪಕ್ ಹೂಡಾ ಕೂಡ ಉತ್ತಮ ಲಯದಲ್ಲಿದ್ಧಾರೆ.

ಆಲ್‌ರೌಂಡರ್ ಮಿಚೆಲ್ ಸ್ಯಾಂಟನರ್ ಈ ಸರಣಿಯಲ್ಲಿ ಕಿವೀಸ್ ಬಳಗವನ್ನು ಮುನ್ನಡೆಸುತ್ತಿದ್ದಾರೆ. ಡೆವೊನ್ ಕಾನ್ವೆ, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್ ಮತ್ತು ಗ್ಲೆನ್ ಫಿಲಿಪ್ಸ್‌ ಮೇಲೆ ಕಿವೀಸ್ ಬ್ಯಾಟಿಂಗ್ ಅವಲಂಬಿತವಾಗಿದೆ.

ತಂಡಗಳು

ಭಾರತ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್‌ ಕೀಪರ್), ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟನರ್ (ನಾಯಕ), ಡೇರಿಲ್ ಮಿಚೆಲ್, ಲಾಕಿ ಫರ್ಗುಸನ್, ಫೀನ್ ಅಲೆನ್, ಡೆವೊನ್ ಕಾನ್ವೆ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮೈಕಲ್ ಬ್ರೇಸ್‌ವೆಲ್, ಜಾಕೋಬ್ ಡಫಿ, ಈಶ್ ಸೋಧಿ, ಬ್ಲೇರ್ ಟಿಕ್ನರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.