ADVERTISEMENT

IND vs NZ ಟಿ20: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ನವೆಂಬರ್ 2021, 13:29 IST
Last Updated 21 ನವೆಂಬರ್ 2021, 13:29 IST
   

ಕೋಲ್ಕತ್ತ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ, ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ರೋಹಿತ್ ಶರ್ಮಾ ಅವರುಚುಟುಕು ಕ್ರಿಕೆಟ್‌ ತಂಡದ ನಾಯಕತ್ವ ವಹಿಸಿಕೊಂಡ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದೆ. ಈಗಾಗಲೇ ಸರಣಿ ಕೈವಶವಾಗಿರುವುದರಿಂದ ಆರಂಭಿಕ ಕೆ.ಎಲ್‌ ರಾಹುಲ್ ಮತ್ತು ಪ್ರಮುಖ ಸ್ಪಿನ್ನರ್ ಆರ್.ಅಶ್ವಿನ್‌ಗೆ ವಿಶ್ರಾಂತಿ ನೀಡಿ, ಇಶಾನ್ ಕಿಶನ್ ಮತ್ತು ಯಜುವೇಂದ್ರ ಚಾಹಲ್‌ಗೆ ಅವಕಾಶ ನೀಡಲಾಗಿದೆ.

ಹೀಗಾಗಿ ಕಿಶನ್, ನಾಯಕನೊಟ್ಟಿಗೆ ಇನಿಂಗ್ಸ್ ಆರಂಭಿಸುವುದಷ್ಟೇ ಅಲ್ಲದೆ ವಿಕೆಟ್ ಕೀಪರ್ ಆಗಿಯೂ ಆಡಬೇಕಾಗಿದೆ.

ADVERTISEMENT

ನ್ಯೂಜಿಲೆಂಡ್ ಪರ ಕಳೆದೆರಡು ಪಂದ್ಯಗಳಲ್ಲಿ ತಂಡ ಮುನ್ನಡೆಸಿದ್ದ ಟಿಮ್ ಸೌಥಿ ಬದಲು ಲಾಕಿ ಫರ್ಗ್ಯೂಸನ್ ಆಡಲಿದ್ದಾರೆ. ನಾಯಕತ್ವದ ಹೊಣೆ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ಹೆಗಲೇರಿದೆ.

ಆಡುವ ಹನ್ನೊಂದರ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್

ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟನರ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪಮನ್, ಲಾಕಿಫರ್ಗ್ಯುಸನ್, ಮಾರ್ಟಿನ್ ಗಪ್ಟಿಲ್, ಆ್ಯಡಂ ಮಿಲ್ನೆ, ಡೆರಿಲ್ ಮಿಚೆಲ್, ಜಿಮ್ಮಿ ನಿಶಾಮ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ಈಶ್ ಸೋಧಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.