
ಶ್ರೇಯಸ್ ಅಯ್ಯರ್
ನವದೆಹಲಿ: ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಭಾರತ ಟಿ20 ಕ್ರಿಕೆಟ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.
ಇದೇ 21ರಿಂದ ನ್ಯೂಜಿಲೆಂಡ್ ಎದುರು ಆರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಆಡಲಿರುವ ಸೂರ್ಯಕುಮಾರ್ ಯಾದವ್ ನಾಯಕತ್ವದ ತಂಡವನ್ನು ಶುಕ್ರವಾರ ಪ್ರಕಟಿಸಲಾಯಿತು. ಗಾಯಗೊಂಡಿರುವ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ಅವರನ್ನು ಕೈಬಿಡಲಾಗಿದೆ.
ಶ್ರೇಯಸ್ ಅವರನ್ನು ಮೊದಲ ಮೂರು ಪಂದ್ಯಗಳಿಗೆ ಮಾತ್ರ ಆಯ್ಕೆ ಮಾಡಲಾಗಿದೆ. ಹೋದ ವರ್ಷ ಫೆಬ್ರುವರಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಡಿದ್ದ ರವಿ ಬಿಷ್ಣೋಯಿ ಈಗ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 42 ಟಿ20 ಪಂದ್ಯಗಳನ್ನು ಆಡಿರುವ ಅವರು 61 ವಿಕೆಟ್ ಪಡೆದಿದ್ದಾರೆ.
ಸರಣಿಯ ಪಂದ್ಯಗಳು; ನಾಗಪುರ (ಜ.21), ರಾಯಪುರ (ಜ.23), ಗುವಾಹಟಿ (ಜ.25), ವಿಶಾಖಪಟ್ಟಣಂ (ಜ.28) ಮತ್ತು ತಿರುವನಂತಪುರ (ಜ.31) ದಲ್ಲಿ ನಡೆಯಲಿವೆ.
ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಶ್ರೇಯಸ್ ಅಯ್ಯರ್ (ಮೊದಲ ಮೂರು ಪಂದ್ಯಗಳಿಗೆ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಜಸ್‌ಪ್ರೀತ್ ಬೂಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ ಚಕ್ರವರ್ತಿ, ಇಶಾನ್ ಕಿಶನ್(ವಿಕೆಟ್‌ಕೀಪರ್), ರವಿ ಬಿಷ್ಣೋಯಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.