ADVERTISEMENT

ಟೆಸ್ಟ್ ಕ್ರಿಕೆಟ್: ಭಾರತ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್‌‌ ಬೌಲಿಂಗ್

ಏಜೆನ್ಸೀಸ್
Published 29 ಫೆಬ್ರುವರಿ 2020, 2:19 IST
Last Updated 29 ಫೆಬ್ರುವರಿ 2020, 2:19 IST
ಭಾರತ ನ್ಯೂಜಿಲೆಂಡ್ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ
ಭಾರತ ನ್ಯೂಜಿಲೆಂಡ್ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ   

ನ್ಯೂಜಿಲೆಂಡ್: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಶನಿವಾರ ಆರಂಭವಾದ ಎರಡನೇಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇಲ್ಲಿನ ಕ್ರೈಸ್ಟ್ ಚರ್ಚ್ಹಗ್ಲೆ ಒವಲ್ ಕ್ರೀಡಾಂಗಣದಲ್ಲಿ ಆರಂಭವಾದ ಪಂದ್ಯದಲ್ಲಿ ಕೊಹ್ಲಿ ಬಳಗ ಬ್ಯಾಟಿಂಗ್ ಮಾಡುತ್ತಿದೆ. ಅಜಿಂಕ್ಯಾ ರಹೆನಾ, ಮಾಯಾಂಕ್ ಅಗರ್ ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಮಹಮದ್ ಶಮಿ, ಉಮೇಶ್ ಯಾದವ್, ಜಸ್ ಪ್ರೀತ್ ಬೂಮ್ರಾ ಭಾರತ ತಂಡದಲ್ಲಿದ್ದಾರೆ.

ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ನ್ಯೂಜಿಲೆಂಡ್ ತಂಡ ಮುಂದಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್‌‌ ಪಡೆದು ಜಯ ದಾಖಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.