
ಪ್ರಜಾವಾಣಿ ವಾರ್ತೆಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಗಳಲ್ಲಿ ಭಾರತ ತಂಡವು ಹಲವು ವರ್ಷಗಳಿಂದ ಪಾಕಿಸ್ತಾನದ ವಿರುದ್ಧ ಪಾರಮ್ಯ ಮೆರೆಯುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿದೆ. ಈ ಹೊತ್ತಿನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗುತ್ತಿವೆ. ಇದರಿಂದಾಗಿ ಅಪಾರ ಕುತೂಹಲ ಗರಿಗೆದರಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದ ಪಡೆಯು ಪಾಕ್ ತಂಡವನ್ನು ಎದುರಿಸಲು ಸಿದ್ಧವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.