
ಭಾರತ ಗೆಲುವಿಗೆ ಹೋಮ–ಹವನ
ನವದೆಹಲಿ: ಮಹಾಶಿವರಾತ್ರಿಯ ದಿನವಾದ ಭಾನುವಾರ ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಉಭಯ ದೇಶಗಳ ನಡುವಣ ರಾಜತಾಂತ್ರಿಕ ಬಿಕ್ಕಟ್ಟಿನ ಕಾರಣಕ್ಕಾಗಿ ಈ ಪಂದ್ಯವು ಅಪಾರ ಕುತೂಹಲ ಕೆರಳಿಸಿದೆ.
ಉತ್ತರ ಪ್ರದೇಶದ ಲಖನೌದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ ವಿಶ್ವ ಹಿಂದೂ ರಕ್ಷಾ ಪರಿಷತ್ ಹಾಗೂ ಹಿಂದೂ ಪರಿಷತ್ ಸದಸ್ಯರು ಸ್ಥಳೀಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹೋಮ, ಹವನ ನಡೆಸಿದರು.
ಮಧ್ಯಪ್ರದೇಶದ ಮಹಾಕಾಳೇಶ್ವರ ದೇವಾಲಯಲ್ಲಿ ಕ್ರಿಕೆಟ್ ಅಭಿಮಾನಿಗಳು ಭಾರತದ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.
ಈ ಪಂದ್ಯದಲ್ಲಿ ಭಾರತ ಗೆಲ್ಲಲಿದೆ, ಭಾರತ ಬಲಿಷ್ಠ ತಂಡವಾಗಿದ್ದು ಹಾರ್ದಿಕ್ ಪಾಂಡ್ಯ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಕಿರಣ್ ಮೊರೆ ಹೇಳಿದ್ದಾರೆ.
ಕೋಲ್ಕತ್ತ, ಪಟ್ನಾ, ಗುವಾಹಟಿ, ಅಹಮದಾಬಾದ್, ಹೈದರಾಬಾದ್, ಚೆನ್ನೈ, ಬೆಂಗಳೂರು, ಭೋಪಾಲ್, ದೆಹಲಿ, ಮುಂಬೈ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಾರತದ ಗೆಲುವಿಗಾಗಿ ದೇವಾಲಯಗಳಲ್ಲಿ ಅಭಿಮಾನಿಗಳು ವಿಶೇಷ ಪೂಜೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.