ADVERTISEMENT

2026ರ ಟಿ20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಭಾರತ–ಪಾಕ್ ಮುಖಾಮುಖಿ ಸಾಧ್ಯತೆ ಎಷ್ಟು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2026, 12:46 IST
Last Updated 20 ಫೆಬ್ರುವರಿ 2026, 12:46 IST
<div class="paragraphs"><p>ಭಾರತ ಹಾಗೂ ಪಾಕಿಸ್ತಾನ ತಂಡಗಳ ಅಭಿಮಾನಿಗಳು</p></div>

ಭಾರತ ಹಾಗೂ ಪಾಕಿಸ್ತಾನ ತಂಡಗಳ ಅಭಿಮಾನಿಗಳು

   

–ಪಿಟಿಐ ಚಿತ್ರ

2026ರ T20 ವಿಶ್ವಕಪ್‌ನ ಲೀಗ್ ಹಂತದಲ್ಲಿ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾ ತಂಡಗಳು ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಭಾರತ ತಂಡುವು 61 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. ಭಾರತ ತಂಡವು ಎ ಗುಂಪಿನಲ್ಲಿ ಯಾವುದೇ ಸೋಲು ಕಾಣದೆ, ಅಗ್ರಸ್ಥಾನದೊಂದಿಗೆ ತನ್ನ ಲೀಗ್ ಅನ್ನು ಮುಕ್ತಾಯಗೊಳಿಸಿದರೆ, ಪಾಕಿಸ್ತಾನ ತಂಡವು ಭಾರತ ವಿರುದ್ಧದ ಸೋಲು ಹೊರತುಪಡಿಸಿ ಉಳಿದ ಪಂದ್ಯಗಳಲ್ಲಿ ಗೆದ್ದು ಸೂಪರ್–8 ಹಂತ ಪ್ರವೇಶಿಸಿದೆ.

ADVERTISEMENT

ಸದ್ಯ, ಲೀಗ್‌ನಲ್ಲಿ ಉಭಯ ತಂಡಗಳ ಪೈಪೋಟಿ ನೋಡಿರುವ ಕ್ರಿಕೆಟ್ ಅಭಿಮಾನಿಗಳು, ಇದೇ ಟೂರ್ನಿಯಲ್ಲಿ ಈ ಎರಡು ತಂಡಗಳ ನಡುವಿನ ಮುಖಾಮುಖಿಯನ್ನು ಮತ್ತೊಮ್ಮೆ ಕಣ್ಣು ತುಂಬಿಕೊಳ್ಳಲು ಎದುರು ನೋಡುತ್ತಿದ್ದಾರೆ.

ಉಭಯ ತಂಡಗಳ ನಡುವೆ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿನ ಮುಖಾಮುಖಿಯಾಗುವ ಸಾಧ್ಯತೆ ಏನು? ಎಂಬುದನ್ನು ನೋಡೋಣ.

ಲೀಗ್‌ನಲ್ಲಿ ಒಂದೇ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಭಾರತ ಹಾಗೂ ಪಾಕಿಸ್ತಾನ ತಂಡಗಳು, ಸೂಪರ್ 8ರ ಹಂತದಲ್ಲಿ ಬೇರೆ ಬೇರೆ ಗುಂಪಿನಲ್ಲಿವೆ. ಭಾರತ ತಂಡವು ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳ ಜೊತೆಗಿನ ಗುಂಪಿನಲ್ಲಿದ್ದರೆ, ಪಾಕಿಸ್ತಾನ ತಂಡವು ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳೊಂದಿಗೆ ಇದೆ.

ಸೆಮಿಫೈನಲ್ ಲೆಕ್ಕಾಚಾರ

ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್ ಅಥವಾ ಫೈನಲ್‌ನಲ್ಲಿ ಎದುರಾಗುವ ಸಾಧ್ಯತೆ ಇದೆ. ಆದಾಗ್ಯೂ, ಸೆಮಿಫೈನಲ್ ಮುಖಾಮುಖಿಯ ಸಾಧ್ಯತೆಯೇ ಹೆಚ್ಚು. ಏಕೆಂದರೆ, ಭಾರತ ತನ್ನ ಗುಂಪಿನಲ್ಲಿ ಅಗ್ರಸ್ಥಾನ ಪಡೆದರೆ, ಇನ್ನೊಂದು ಗುಂಪಿನಲ್ಲಿ ಪಾಕಿಸ್ತಾನ ಎರಡನೇ ಸ್ಥಾನ ಪಡೆದು ಸೆಮಿಫೈನಲ್ ಪ್ರವೇಶಿಸಿದರೆ, ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಮಿಫೈನಲ್‌ನಲ್ಲಿ ಎದುರಾಗಲಿವೆ.

ಅಥವಾ ಪಾಕಿಸ್ತಾನ ತಂಡವು ತನ್ನ ಗುಂಪಿನಲ್ಲಿ ಅಗ್ರಸ್ಥಾನ ಪಡೆದು, ಭಾರತ ಎರಡನೇ ಸ್ಥಾನ ಪಡೆದುಕೊಂಡರೆ, ಉಭಯ ತಂಡಗಳು ಸೆಮಿಫೈನಲ್‌ನಲ್ಲಿ ಸೆಣಸಾಡಲಿವೆ.

ಫೈನಲ್ ಸಾಧ್ಯತೆ

ಉಭಯ ತಂಡಗಳು ಸೂಪರ್–8ರಲ್ಲಿ ತಲಾ ಅಗ್ರಸ್ಥಾನ ಅಥವಾ ಎರಡನೇ ಸ್ಥಾನ ಪಡೆದುಕೊಂಡರೆ, ಸೆಮಿಫೈನಲ್‌ನಲ್ಲಿ ಬೇರೆ ಬೇರೆ ತಂಡಗಳನ್ನು ಎದುರಿಸಲಿವೆ. ಆಗ, ಸೆಮಿಫೈನಲ್‌ನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸಿ ಫೈನಲ್ ಪ್ರವೇಶಿಸಬೇಕು. ಆ ಮೂಲಕ ಅಭಿಮನಿಗಳು ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಪಂದ್ಯದಲ್ಲಿ ಬದ್ಧ ಎದುರಾಳಿಗಳ ಹಣಾಹಣಿಯನ್ನು ಮತ್ತೊಮ್ಮೆ ಕಣ್ಣುತುಂಬಿಕೊಳ್ಳಬಹುದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.