(ಚಿತ್ರ ಕೃಪೆ:X/@BCCI)
ಜೋಹಾನ್ಸ್‌ಬರ್ಗ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಈ ಪಂದ್ಯವು ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಭಾರತ ಆಡುತ್ತಿರುವ ಮೊದಲ ಏಕದಿನ ಪಂದ್ಯ ಇದಾಗಿದೆ.
ಕನ್ನಡಿಗ ಕೆ.ಎಲ್. ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಸಾಯಿ ಸುದರ್ಶನ್ ಪದಾರ್ಪಣೆ...
ಭಾರತದ ಪರ ಸಾಯಿ ಸುದರ್ಶನ್ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಮತ್ತೊಂದೆಡೆ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಕ್ಷಿಣ ಆಫ್ರಿಕಾ ಆಟಗಾರರು ಇಂದು ಪಿಂಕ್ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದಾರೆ.
ಏಕದಿನ ಸರಣಿಗೂ ಮುನ್ನ ನಡೆದ ಮೂರು ಪಂದ್ಯಗಳ ಟ್ವೆಂಟಿ-20 ಸರಣಿ 1-1ರ ಅಂತರದಲ್ಲಿ ಸಮಬಲಗೊಂಡಿತ್ತು.
ಭಾರತ ಪ್ಲೇಯಿಂಗ್ ಇಲೆವೆನ್:
ಸಾಯಿ ಸುದರ್ಶನ್, ಋತುರಾಜ್ ಗಾಯಕವಾಡ್, ಕೆ.ಎಲ್. ರಾಹುಲ್ (ನಾಯಕ), ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಆವೇಶ್ ಖಾನ್ ಮತ್ತು ಮುಕೇಶ್ ಕುಮಾರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.