
(ಚಿತ್ರ ಕೃಪೆ: X/@ProteasMenCSA)
ಗುವಾಹಟಿ: ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ಗಳು ದಿಟ್ಟ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.
ತಾಜಾ ವರದಿಯ ವೇಳೆಗೆ 125 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 358 ರನ್ ಗಳಿಸಿದೆ.
ಗುವಾಹಟಿಯಲ್ಲಿ ನಡೆಯುತ್ತಿರುವ ಪಂದ್ಯದ ಮೊದಲ ದಿನದಂತ್ಯಕ್ಕೆ ದ.ಆಫ್ರಿಕಾ ಆರು ವಿಕೆಟ್ ನಷ್ಟಕ್ಕೆ 247 ರನ್ ಗಳಿಸಿತ್ತು.
ಇಂದು ಸೆನುರಾನ್ ಮುತ್ತುಸಾಮಿ ಹಾಗೂ ಕೈಲ್ ವೆರೆಯನ್ ಜೋಡಿಯು ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿತು.
ಈ ಜೋಡಿ ಏಳನೇ ವಿಕೆಟ್‌ಗೆ 88 ರನ್‌ಗಳ ಅಮೂಲ್ಯ ಜೊತೆಯಾಟದಲ್ಲಿ ಭಾಗಿಯಾದರು. ವೆರೆಯನ್ 45 ರನ್ ಗಳಿಸಿ ಔಟ್ ಆದರು.
ಅತ್ತ ಅಜೇಯ 75 ರನ್ ಗಳಿಸಿರುವ ಮುತ್ತುಸಾಮಿ ಶತಕದತ್ತ ಮುನ್ನುಗ್ಗುತ್ತಿದ್ದಾರೆ. ಅವರಿಗೆ ಮಾರ್ಕೊ ಜಾನ್ಸೆನ್ (17*) ಸಾಥ್ ನೀಡುತ್ತಿದ್ದಾರೆ.
ಭಾರತದ ಪರ ಕುಲದೀಪ್ ಯಾದವ್ ಮೂರು ಮತ್ತು ರವೀಂದ್ರ ಜಡೇಜ ಎರಡು ವಿಕೆಟ್ ಗಳಿಸಿದ್ದಾರೆ.
ಕೋಲ್ಕತ್ತದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲನುಭವಿಸಿದ್ದ ಭಾರತ ಸರಣಿ ಸಮಬಲಗೊಳಿಸಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.