ADVERTISEMENT

IND vs SA 3rd T20I: ಟಾಸ್ ಗೆದ್ದ ದ.ಆಫ್ರಿಕಾ ಫೀಲ್ಡಿಂಗ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಡಿಸೆಂಬರ್ 2023, 14:42 IST
Last Updated 14 ಡಿಸೆಂಬರ್ 2023, 14:42 IST
<div class="paragraphs"><p>ಸೂರ್ಯಕುಮಾರ್ ಯಾದವ್</p></div>

ಸೂರ್ಯಕುಮಾರ್ ಯಾದವ್

   

(ರಾಯಿಟರ್ಸ್ ಚಿತ್ರ)

ಜೋಹಾನ್ಸ್‌ಬರ್ಗ್: ಪ್ರವಾಸಿ ಭಾರತ ವಿರುದ್ಧ ನಡೆಯುತ್ತಿರುವ ಅಂತಿಮ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ.

ADVERTISEMENT

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸಮಬಲ ಸಾಧಿಸಲು ಭಾರತ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಎರಡನೇ ಟಿ20 ಪಂದ್ಯದಲ್ಲಿ ಭಾರತ ಸೋಲಿಗೆ ಶರಣಾಗಿತ್ತು.

ಇಂದಿನ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿದೆ. ಕಳೆದ ಪಂದ್ಯದಲ್ಲಿ ಸೋತರೂ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.