ADVERTISEMENT

IND vs SA 4th T20I: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ನವೆಂಬರ್ 2024, 14:35 IST
Last Updated 15 ನವೆಂಬರ್ 2024, 14:35 IST
<div class="paragraphs"><p>ಸೂರ್ಯಕುಮಾರ್ ಯಾದವ್</p></div>

ಸೂರ್ಯಕುಮಾರ್ ಯಾದವ್

   

(ಪಿಟಿಐ ಚಿತ್ರ)

ಜೊಹಾನೆಸ್‌ಬರ್ಗ್‌: ಇಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಹಾಗೂ ಅಂತಿಮ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಕಳೆದ ಪಂದ್ಯ ವಿಜೇತ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ.

ಸರಣಿ ಗೆಲುವಿನತ್ತ ಭಾರತ ಚಿತ್ತ:

ಬುಧವಾರ ಮೂರನೇ ಪಂದ್ಯವನ್ನು 11 ರನ್‌ಗಳಿಂದ ಗೆದ್ದ ಭಾರತ ಸರಣಿಯಲ್ಲಿ 2–1 ಮುನ್ನಡೆ ಸಾಧಿಸಿದೆ. ಈಗ ಭಾರತ ತಂಡವು 3–1ರಿಂದ ಸರಣಿ ಗೆಲ್ಲುವ ಅವಕಾಶ ಹೊಂದಿದೆ.

‘ವಾಂಡರರ್ಸ್‌’ ಕ್ರೀಡಾಂಗಣ ಭಾರತಕ್ಕೆ ಸವಿನೆನಪುಗಳ ತಾಣ. ಇಲ್ಲಿಯೇ ಭಾರತ 2007ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿತ್ತು. ನಾಯಕ ಸೂರ್ಯಕುಮಾರ್, ವರ್ಷದ ಹಿಂದೆ ನಡೆದ ಟಿ20 ಸರಣಿಯಲ್ಲಿ ತಮ್ಮ ಕೊನೆಯ ಶತಕ ಹೊಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.