ADVERTISEMENT

IND vs SA 1st Test: ಭಾರತಕ್ಕೆ 124 ರನ್ ಗುರಿ; ಜೈಸ್ವಾಲ್, ರಾಹುಲ್ ವೈಫಲ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ನವೆಂಬರ್ 2025, 6:12 IST
Last Updated 16 ನವೆಂಬರ್ 2025, 6:12 IST
   

ಕೋಲ್ಕತ್ತ: ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ 153 ರನ್‌ಗಳಿಗೆ ಆಲೌಟ್ ಆಗಿರುವ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ 124 ರನ್‌ಗಳ ಗುರಿ ನೀಡಿದೆ.

ಎರಡನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 97 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾ, ಇಂದು 150ರ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅತ್ಯಂತ ಕಠಿಣ ಪಿಚ್‌ನಲ್ಲಿ ನಾಯಕ ತೆಂಬಾ ಬವುಮಾ ಅರ್ಧಶತಕ(136 ಎಸೆತಗಳಲ್ಲಿ 55 ರನ್) ಸಿಡಿಸಿದರು.

ರವೀಂದ್ರ ಜಡೇಜಾ 4 ವಿಕೆಟ್ ಉರುಳಿಸಿ ಯಶಸ್ವಿ ಬೌಲರ್ ಎನಿಸಿದರು. ನಾಯಕ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ಉಪನಾಯಕ ರಿಷಭ್ ಪಂತ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

ADVERTISEMENT

ಸಾಧಾರಣ ಗುರಿ ಬೆನ್ನತ್ತಿರುವ ಭಾರತ ತಂಡ ರನ್ ಖಾತೆ ತೆರೆಯುವ ಮುನ್ನವೇ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್(0) ಔಟಾಗಿ ನಿರ್ಗಮಿಸಿದರೆ, ಅವರ ಹಿಂದೆಯೇ ಕೆ.ಎಲ್. ರಾಹುಲ್(1) ಪೆವಿಲಿಯನ್ ಸೇರಿಕೊಂಡರು.

ಬೌಲಿಂಗ್‌ಗೆ ಅನುಕೂಲಕರವಾದ ಪಿಚ್‌ನಲ್ಲಿ ಭಾರತಕ್ಕೆ 124 ರನ್ ಗುರಿ ಸಹ ಕಬ್ಬಿಣದ ಕಡಲೆಯಾಗಿದೆ.

ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 159 ರನ್ ಗಳಿಸಿತ್ತು. ಅದಕ್ಕುತ್ತರವಾಗಿ ಭಾರತ ತಂಡ189 ರನ್ ಗಳಿಸಿ 30 ರನ್ ಮುನ್ನಡೆ ಪಡೆದಿತ್ತು. ಎರಡನೇ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 153 ರನ್‌ಗಳಿಗೆ ಆಲೌಟ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.