
ಯಶಸ್ವಿ ಜೈಸ್ವಾಲ್
(ಪಿಟಿಐ ಚಿತ್ರ)
ದೆಹಲಿ: ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ 318\2 ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಭಾರತದ ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಂಡ ಬ್ಯಾಟರ್‌ಗಳು ರನ್ ಗುಡ್ಡೆಹಾಕಿದರು. ಯಶಸ್ವಿ ಜೈಸ್ವಾಲ್ (173*), ಸಾಯಿ ಸುದರ್ಶನ್ (87), ಕೆ.ಎಲ್ ರಾಹುಲ್ (38) ಹಾಗೂ ನಾಯಕ ಶುಭಮನ್ ಗಿಲ್ (20*) ರನ್ ಕಲೆಹಾಕಿದರು.
ದಿನವಿಡೀ ಬೌಲಿಂಗ್ ಮಾಡಿದ ವಿಂಡೀಸ್ ಪರ ಜೋಮೆಲ್ ವಾರಿಕನ್ ಮಾತ್ರ 2 ವಿಕೆಟ್ ಪಡೆದುಕೊಂಡರು. ಇನ್ನೂ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ 7ನೇ ಶತಕ ದಾಖಲಿಸಿ ಅಜೇಯರಾಗಿ ಉಳಿದಿದ್ದಾರೆ. ಇವರ ಜೊತೆಗೆ ನಾಯಕ ಶುಭಮನ್ ಗಿಲ್ ಕೂಡ 20 ರನ್ ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.