ಶುಭಮನ್ ಗಿಲ್, ಕೆ.ಎಲ್. ರಾಹುಲ್
(ಚಿತ್ರ ಕೃಪೆ: ಬಿಸಿಸಿಐ)
ದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಟೀಂ ಇಂಡಿಯಾ 518\5 ರನ್‌ಗಳ ಬೃಹತ್ ಮೊತ್ತ ಕಲೆಹಾಕುವ ಮೂಲಕ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.
ಭಾರತದ ಪರ ಮೊದಲ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ (175) ಮತ್ತು ನಾಯಕ ಶುಭ್‌ಮನ್ ಗಿಲ್ (129*) ಹಾಗೂ ಸಾಯಿ ಸುದರ್ಶನ್ (87) ಉತ್ತಮ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು.
ವೆಸ್ಟ್ ಇಂಡೀಸ್ ಪರ ಎಡಗೈ ಸ್ಪಿನ್ನರ್ ಜೋಮೆಲ್ ವಾರಿಕನ್ (3/98) ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದರು.
ಸಂಕ್ಷಿಪ್ತ ಸ್ಕೋರ್:
ಭಾರತ ಮೊದಲ ಇನಿಂಗ್ಸ್: 134.2 ಓವರ್‌ಗಳಲ್ಲಿ 5 ವಿಕೆಟ್‌ಗೆ 518 ರನ್ ಡಿಕ್ಲೇರ್ (ಯಶಸ್ವಿ ಜೈಸ್ವಾಲ್ 175, ಶುಭಮನ್ ಗಿಲ್ ಔಟಾಗದೆ 129, ಸಾಯಿ ಸುದರ್ಶನ್ 87. ವಿಂಡೀಸ್ ಪರ ಜೋಮೆಲ್ ವಾರಿಕಾನ್ 3/98 ಹಾಗೂ ರೋಸ್ಟನ್ ಚೇಸ್ 1\83)