ADVERTISEMENT

ಮಹಿಳಾ ಟಿ20 ವಿಶ್ವಕಪ್: ಜೆಮಿಮಾ ಫಿಫ್ಟಿ, ಪಾಕ್‌ ವಿರುದ್ಧ ಭಾರತಕ್ಕೆ ಜಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಫೆಬ್ರುವರಿ 2023, 16:21 IST
Last Updated 12 ಫೆಬ್ರುವರಿ 2023, 16:21 IST
ಜೆಮಿಮಾ ರಾಡ್ರಿಗಸ್‌ ಬ್ಯಾಟಿಂಗ್ ವೈಖರಿ –ಎಎಫ್‌ಪಿ ಚಿತ್ರ
ಜೆಮಿಮಾ ರಾಡ್ರಿಗಸ್‌ ಬ್ಯಾಟಿಂಗ್ ವೈಖರಿ –ಎಎಫ್‌ಪಿ ಚಿತ್ರ   

‌ಕೇಪ್‌ಟೌನ್‌: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾನುವಾರ ಪಾಕಿಸ್ತಾನ ವಿರುದ್ಧ ಏಳು ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು. ಬಿಸ್ಮಾ ಮಾರೂಫ್‌ ಔಟಾಗದೆ 68, ಆಯೇಷಾ ನಸೀಮ್ ಔಟಾಗದೆ 43 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

150 ರನ್‌ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಭಾರತದ ಪರ ಜೆಮಿಮಾ ರಾಡ್ರಿಗಸ್‌ ಔಟಾಗದೆ 53, ರಿಚಾ ಘೋಷ್ ಔಟಾಗದೆ 31, ಶಫಾಲಿ ವರ್ಮಾ 33, ಯಾಸ್ತಿಕಾ ಭಾಟಿಯಾ 17, ಹರ್ಮನ್‌ಪ್ರೀತ್ ಕೌರ್ 16 ರನ್ ಗಳಿಸಿದರು.

ADVERTISEMENT

ಪಾಕ್ ಪರ ನಶ್ರಾ ಸಂಧು 2, ಸಾದಿಯಾ ಇಕ್ಬಾಲ್ ಒಂದು ವಿಕೆಟ್ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.