ADVERTISEMENT

AUS Women vs IND Women: ಆಸೀಸ್ ವಿರುದ್ಧ ಏಕದಿನ ಸರಣಿ ಸೋತ ಭಾರತ ವನಿತೆಯರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2026, 11:18 IST
Last Updated 27 ಫೆಬ್ರುವರಿ 2026, 11:18 IST
<div class="paragraphs"><p>ಫೋಬೆ ಲಿಚ್‌ಫೀಲ್ಡ್</p></div>

ಫೋಬೆ ಲಿಚ್‌ಫೀಲ್ಡ್

   

ಹೋಬಾರ್ಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಸೀಸ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು, ಪ್ರತೀಕಾ ರಾವಲ್ (52 ರನ್:81 ಎಸೆತ) ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ (54 ರನ್:70 ಎಸೆತ) ಅವರ ಅರ್ಧಶತಕದ ನೆರವಿನಿಂದ 50 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್‌ ನಷ್ಟಕ್ಕೆ 251 ರನ್‌ ಗಳಿಸಿತು.

ADVERTISEMENT

252 ರನ್‌ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡವು ಜಾರ್ಜಿಯಾ ವೋಲ್ ಅವರ ಆಕರ್ಷಕ ಶತಕ(101 ರನ್: 82 ಎಸೆತ) ಹಾಗೂ ಆರಂಭಿಕ ಆಟಗಾರ್ತಿ ಫೋಬೆ ಲಿಚ್‌ಫೀಲ್ಡ್ (80 ರನ್: 62 ಎಸೆತ) ಅವರ ಅರ್ಧಶತಕದ ನೆರವಿನಿಂದ 36.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಮೊದಲ ಪಂದ್ಯದಲ್ಲಿ ಆರು ವಿಕೆಟ್‌ ಗೆಲುವು ಸಾಧಿಸಿದ್ದ ಆಸೀಸ್, ಎರಡನೇ ಪಂದ್ಯದಲ್ಲಿ 5 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2–0 ಅಂತರದಲ್ಲಿ ಗೆದ್ದುಕೊಂಡಿತು.

ಏಕದಿನ ಸರಣಿಗೂ ಮುನ್ನ ನಡೆದ ಟಿ–20 ಸರಣಿಯಲ್ಲಿ ಭಾರತವು 2–1 ಅಂತರದಲ್ಲಿ ಸರಣಿ ಗೆಲುವು ಸಾಧಿಸಿತ್ತು. ಇದೀಗ ಏಕದಿನ ಸರಣಿಯಲ್ಲಿ ವೈಟ್‌ವಾಶ್ ತಪ್ಪಿಸಿಕೊಳ್ಳಲು ಮಾರ್ಚ್‌ 1ರಂದು ನಡೆಯುವ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾವು ಗೆಲುವು ಸಾಧಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.