ADVERTISEMENT

ಮಹಿಳಾ ಟಿ20 ಕ್ರಿಕೆಟ್: ವೆಸ್ಟ್ ಇಂಡೀಸ್ ಎದುರು 49 ರನ್ ಅಂತರದ ಜಯ ಸಾಧಿಸಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಡಿಸೆಂಬರ್ 2024, 15:51 IST
Last Updated 15 ಡಿಸೆಂಬರ್ 2024, 15:51 IST
<div class="paragraphs"><p>ಸ್ಮೃತಿ ಮಂದಾನ, ಜೆಮಿಮಾ ರಾಡಿಗ್ರಸ್‌</p></div>

ಸ್ಮೃತಿ ಮಂದಾನ, ಜೆಮಿಮಾ ರಾಡಿಗ್ರಸ್‌

   

ನವಿಮುಂಬೈ: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡ 49 ರನ್‌ ಅಂತರದ ಗೆಲುವು ಸಾಧಿಸಿದೆ.

ಇಲ್ಲಿನ ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ಇಂದು (ಭಾನುವಾರ) ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 196 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಪ್ರವಾಸಿ ಪಡೆ, ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ಗಳನ್ನು ಕಳೆದುಕೊಂಡು 146 ರನ್‌ ಗಳಿಸಲಷ್ಟೇ ಶಕ್ತವಾಯಿತು.

ADVERTISEMENT

ಕ್ವಿಯಾನಾ ಜೋಸೆಫ್‌ (49 ರನ್‌) ಹಾಗೂ ಡಿಯಾಂಡ್ರ ದಾಟಿನ್‌ (52 ರನ್‌) ಉತ್ತಮ ಬ್ಯಾಟಿಂಗ್ ನಡೆಸಿದರೂ, ತಮ್ಮ ತಂಡಕ್ಕೆ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ. ಭಾರತ ಪರ ಟಿಟಸ್‌ ಸಧು ಮೂರು ವಿಕೆಟ್‌ ಪಡೆದರೆ, ದೀಪ್ತಿ ಶರ್ಮಾ ಮತ್ತು ರಾಧಾ ಯಾದವ್‌ ತಲಾ ಎರಡು ವಿಕೆಟ್‌ ಕಿತ್ತರು.

ಇದಕ್ಕೂ ಮೊದಲು ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತದ ಇನಿಂಗ್ಸ್‌ಗೆ ಸ್ಮೃತಿ ಮಂದಾನ (54 ರನ್‌), ಜೆಮಿಮಾ ರಾಡಿಗ್ರಸ್‌ (73 ರನ್‌) ಬಲ ತುಂಬಿದರು. ಇವರಿಬ್ಬರ ಅಮೋಘ ಅರ್ಧಶತಕಗಳ ನೆರವಿನಿಂದ ಹರ್ಮನ್‌ಪ್ರೀತ್‌ ಕೌರ್‌ ಪಡೆ 4 ವಿಕೆಟ್‌ ಕಳೆದುಕೊಂಡು 195 ರನ್‌ ಕಲೆಹಾಕಿತ್ತು.

ಟೂರ್ನಿಯ ಎರಡನೇ ಪಂದ್ಯವೂ ಇದೇ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.