ನವಿ ಮುಂಬೈ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯನ್ನು ಕೈವಶ ಮಾಡಿಕೊಳ್ಳುವ ಛಲದಲ್ಲಿದೆ.
ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಗೆದ್ದಿತ್ತು. ಮಂಗಳವಾರ ಎರಡನೇ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.
ಮೊದಲ ಪಂದ್ಯದಲ್ಲಿ ಸ್ಮೃತಿ ಮಂದಾನ ಮತ್ತು ಜೆಮಿಮಾ ರಾಡ್ರಿಗಸ್ ಅವರು ಅಮೋಘ ಅರ್ಧಶತಕ ಗಳಿಸಿದ್ದರು. ಮಧ್ಯಮವೇಗಿ ತಿತಾಸ್ ಸಾಧು ಕೂಡ ಉತ್ತಮ ಲಯದಲ್ಲಿದ್ದಾರೆ. ವಿಂಡೀಸ್ ತಂಡದ ಒಲನಾ ಜೋಸೆಫ್, ದಿಯಾಂದ್ರ ಡಾಟಿನ್ ಅವರೂ ಉತ್ತಮ ಫಾರ್ಮ್‌ನಲ್ಲಿದ್ಧಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1–0 ಮುನ್ನಡೆ ಗಳಿಸಿದೆ.
ಪಂದ್ಯ ಆರಂಭ: ರಾತ್ರಿ 7ರಿಂದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.