ADVERTISEMENT

1973–2025: ಐಸಿಸಿ ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡದ ಪಯಣ ಹೀಗಿತ್ತು

ಪಿಟಿಐ
Published 3 ನವೆಂಬರ್ 2025, 6:41 IST
Last Updated 3 ನವೆಂಬರ್ 2025, 6:41 IST
<div class="paragraphs"><p>ಮಹಿಳಾ ಏಕದಿನ ವಿಶ್ವಕ‍ಪ್ ಗೆದ್ದ ಸಂಭ್ರಮದಲ್ಲಿ ಭಾರತ ತಂಡ</p></div>

ಮಹಿಳಾ ಏಕದಿನ ವಿಶ್ವಕ‍ಪ್ ಗೆದ್ದ ಸಂಭ್ರಮದಲ್ಲಿ ಭಾರತ ತಂಡ

   

ಚಿತ್ರ: @BCCIWomen

ನವಿ ಮುಂಬೈ: ಇಲ್ಲಿನ ಡಿವೈ ಪಾಟೀಲ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಮಹಿಳಾ ಏಕದಿನ ಮಹಿಳಾ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳ ಅಂತರದಲ್ಲಿ ಸೋಲಿಸಿ ಭಾರತ ಮಹಿಳಾ ತಂಡ ಚಾಂಪಿಯನ್ ಆಗಿದೆ. ಹಾಗಿದ್ದರೆ, 1973ರಿಂದ ಆರಂಭವಾದ ಈ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಸಾಧನೆ ಹೇಗಿತ್ತು ಎಂಬುದನ್ನು ನೋಡೋಣ.

ADVERTISEMENT

ಐಸಿಸಿ ಮಹಿಳಾ ವಿಶ್ವಕಪ್ (ODI) ಮತ್ತು ಐಸಿಸಿ ಮಹಿಳಾ T20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡದ ಪ್ರದರ್ಶನಗಳ ಪಟ್ಟಿ ಹೀಗಿದೆ.

ಐಸಿಸಿ ಮಹಿಳಾ ವಿಶ್ವಕಪ್ (ಏಕದಿನ ಮಾದರಿ)

  • 1973– ಇಂಗ್ಲೆಂಡ್‌ನಲ್ಲಿ ಆಯೋಜಿಸಿದ್ದ ಚೊಚ್ಚಲ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಭಾಗವಹಿಸಿರಲಿಲ್ಲ.

  • 1978– ಭಾರತದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಭಾಗವಹಿಸಿ ಗುಂಪು ಹಂತದಲ್ಲೇ ಹೊರಬಿದ್ದಿತ್ತು.

  • 1982– ನ್ಯೂಜಿಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಕೂಡ ಗುಂಪು ಹಂತದಲ್ಲೇ ಹೊರಬಿದ್ದಿತ್ತು. ಆದರೆ, ಈ ವಿಶ್ವಕಪ್‌ನಲ್ಲಿ ಭಾರತ ತನ್ನ ಮೊದಲ ಜಯ ದಾಖಲಿಸಿತ್ತು.

  • 1988– ಆಸ್ಟ್ರೇಲಿಯಾದಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಭಾಗವಹಿಸಿರಲಿಲ್ಲ.

  • 1993– ಇಂಗ್ಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡ ರೌಂಡ್ ರಾಬಿನ್ ಹಂತದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಇದುವರೆಗಿನ ಉತ್ತಮ ಸಾಧನೆ ಮಾಡಿತ್ತು.

  • 1997 – ಭಾರತ ಎರಡನೇ ಭಾರಿ ಮಹಿಳಾ ವಿಶ್ವಕಪ್‌ ಆಯೋಜಿಸಿತ್ತು. ಆಗ ಅಮೋಘ ಪ್ರದರ್ಶನ ತೋರುವ ಮೂಲಕ ಸೆಮಿಫೈನಲ್ ಪ್ರವೇಶ ಪಡೆದುಕೊಂಡಿತ್ತು. ಆದರೆ, ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

  • 2000– ನ್ಯೂಜಿಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಕೂಡ ಭಾರತ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ, ಅಲ್ಲಿ ನ್ಯೂಜಿಲೆಂಡ್ ವಿರುದ್ಧವೇ ಸೋತು ಹೊರಬಿದ್ದಿತ್ತು.

  • 2005– ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಫೈನಲ್ ಪ್ರವೇಶಿಸಿತ್ತು. ಆದರೆ, ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ಸ್ ಅಪ್‌ಗೆ ತೃಪ್ತಿಪಡಬೇಕಾಯಿತು.

  • 2009– ಆಸ್ಟ್ರೇಲಿಯಾದಲ್ಲಿ ಆಯೋಜನೆ ಮಾಡಲಾಗಿತ್ತು. ಇಲ್ಲಿ ಭಾರತ 3ನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಇಲ್ಲಿ ಕೂಡ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

  • 2013 – ಭಾರತದಲ್ಲೇ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಗುಂಪು ಹಂತದಲ್ಲೇ ಸೋತು ಹೊರಬಿದ್ದಿತ್ತು.

  • 2017 – ಇಂಗ್ಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋತು ರನ್ನರ್ಸ್ ಅಪ್ ಪ್ರಶಸ್ತಿ ಪಡೆದುಕೊಂಡಿತ್ತು.

  • 2022– ನ್ಯೂಜಿಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ತಂಡ ಗುಂಪು ಹಂತದಲ್ಲೇ ಸೋತು ಹೊಬಿದ್ದಿತ್ತು.

  • 2025– ಭಾರತದಲ್ಲಿ ಆಯೋಜಿಸಲಾಗಿದ್ದ 13ನೇ ವಿಶ್ವಕಪ್‌ನಲ್ಲಿ, ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳಿಂದ ಪರಾಭವಗೊಳಿಸಿ ಚಾಂಪಿಯನ್ ಆಗಿದೆ.

ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡದ ಸಾಧನೆ

  • 2009– ಇಂಗ್ಲೆಂಡ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ತಂಡ ಸೆಮಿಫೈನಲ್‌ ಪ್ರವೇಶಿಸಿ, ಅಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು.

  • 2010– ವೆಸ್ಟ್ ಇಂಡೀಸ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ ಟೂರ್ನಮೆಂಟ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

  • 2012– ಶ್ರೀಲಂಕಾ ಆಯೋಜಿಸಿದ್ದ ಟೂರ್ನಿಯಲ್ಲಿ ಭಾರತ ಗುಂಪು ಹಂತದಲ್ಲೇ ಹೊರಬಿದ್ದಿತ್ತು.

  • 2014 –ಶ್ರೀಲಂಕಾ ಆಯೋಜಿಸಿದ್ದ ಟೂರ್ನಿಯಲ್ಲಿ ಭಾರತ ಗುಂಪು ಹಂತದಲ್ಲೇ ಹೊರಬಿದ್ದಿತ್ತು.

  • 2016–ಭಾರತದಲ್ಲೇ ಆಯಜಿಸಿದ್ದ ವಿಶ್ವಕಪ್‌ನಲ್ಲಿ ಗುಂಪು ಹಂತದಲ್ಲೇ ಹೊರಬಿದ್ದಿತ್ತು.

  • 2018 ವೆಸ್ಟ್ ಇಂಡೀಸ್‌ನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು.

  • 2020 ಆಸ್ಟ್ರೇಲಿಯಾದಲ್ಲಿ ಆಯೋಜನೆ. ಫೈನಲ್ ಪ್ರವೇಶಿಸಿದ್ದ ಭಾರತ ತಂಡ ಆಸೀಸ್ ವಿರುದ್ಧ ಸೋಲು ಅನುಭವಿಸಿ ರನ್ನರ್ಸ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

  • 2023 – ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋಲು ಅನುಭವಿಸಿತ್ತು.

  • 2024 –ಯುಎಇನಲ್ಲಿ ಆಯೋಜಿಸಿದ್ದ ವಿಶ್ವಕಪ್‌ನಲ್ಲಿ ಭಾರತ ಗ್ರೂಪ್‌ ಸ್ಟೇಜ್‌ನಲ್ಲಿ ಹೊರಬಿದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.