ADVERTISEMENT

CWG 2022– ಕ್ರಿಕೆಟ್ | ಸೆಮಿಫೈನಲ್‌ ಪ್ರವೇಶಿಸಿದ ಭಾರತದ ಮಹಿಳೆಯರ ತಂಡ

ಕಾಮನ್‌ವೆಲ್ತ್‌ ಗೇಮ್ಸ್‌ 2022

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಆಗಸ್ಟ್ 2022, 2:25 IST
Last Updated 4 ಆಗಸ್ಟ್ 2022, 2:25 IST
   

ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರ ಮಹಿಳೆಯರ ಕ್ರಿಕೆಟ್‌ನಲ್ಲಿ ಬಾರ್ಬಡೋಸ್ ತಂಡವನ್ನು 100 ರನ್‌ಗಳಿಂದ ಮಣಿಸಿದ ಭಾರತ ತಂಡ, ಸೆಮಿಫೈನಲ್ ಪ್ರವೇಶಿಸಿದೆ.

ಭಾರತದ ಪರ ರೇಣುಕಾ ಸಿಂಗ್ ನಾಲ್ಕು ವಿಕೆಟ್ ಗಳಿಸಿ ಮಿಂಚಿದರು. ಹರ್ಮನ್‌ಪ್ರೀತ್ ಕೌರ್, ರಾಧಾ ಯಾದವ್ ಮತ್ತು ಸ್ನೇಹ ರಾಣಾ ತಲಾ ಒಂದು ವಿಕೆಟ್ ಪಡೆಯುವ ಮೂಲಕ ತಂಡ ಸುಲಭ ಜಯ ಗಳಿಸಲು ನೆರವಾದರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಜೆಮ್ಮಿ ರೊಡ್ರಿಗಸ್ ಅವರ 56 ರನ್‌ಗಳ ನೆರವಿನಿಂದ ಒಟ್ಟು 162 ರನ್ ಗಳಿಸಿತ್ತು.

ADVERTISEMENT

20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡ ಬಾರ್ಬಡೋಸ್ ತಂಡ, 62 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ಭಾರತ, ‘ಗ್ರೂಪ್ ಎ‘ಯಲ್ಲಿ ನಾಲ್ಕು ಅಂಕ ಮತ್ತು ಎರಡು ಗೆಲುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ.

6 ಅಂಕ ಗಳಿಸಿರುವ ಆಸ್ಟ್ರೇಲಿಯಾ, ಮೊದಲ ಸ್ಥಾನದಲ್ಲಿದೆ. ಶನಿವಾರ ಸೆಮಿಫೈನಲ್ ಪಂದ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.