ADVERTISEMENT

ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಮೇ 2025, 1:57 IST
Last Updated 18 ಮೇ 2025, 1:57 IST
<div class="paragraphs"><p>ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರು ಕುಟುಂಬ ಸಮೇತರಾಗಿ&nbsp;ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದರು.</p></div>

ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರು ಕುಟುಂಬ ಸಮೇತರಾಗಿ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದರು.

   

–ಎಕ್ಸ್‌ ಚಿತ್ರ

ತಿರುಪತಿ: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್ ಅವರು ಇಂದು (ಭಾನುವಾರ) ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ADVERTISEMENT

ಗೌತಮ್ ಗಂಭೀರ್ ಅವರು ಪತ್ನಿ ಹಾಗೂ ಪುತ್ರಿಯರ ಸಮೇತರಾಗಿ ತಿರುಪತಿಗೆ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ‘ಎಕ್ಸ್‌’ನಲ್ಲಿ ಹಂಚಿಕೊಂಡಿದೆ.

ಈಚೆಗೆ ಗೌತಮ್‌ ಗಂಭೀರ್‌ ಅವರಿಗೆ ‘ಐಎಸ್‌ಐಎಸ್‌ ಕಾಶ್ಮೀರ’ ಎನ್ನುವ ಹೆಸರಿನಿಂದ ‘ನಾನು ನಿನ್ನನ್ನು ಕೊಲ್ಲುತ್ತೇನೆ’ ಎಂದು ಎರಡು ಬಾರಿ ಬೆದರಿಕೆ ಇ–ಮೇಲ್‌ ಬಂದಿತ್ತು. ಹೀಗಾಗಿ, ಗೌತಮ್‌ ಅವರಿಗೆ ದೆಹಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

‘ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ನಡೆದ ದಿನವೇ ಗೌತಮ್‌ ಗಂಭೀರ್‌ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಅವರೇ ನಮಗೆ ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ’ ಎಂದು ಡಿಸಿಪಿ ಎಂ. ಹರ್ಷ ವರ್ಧನ್‌ ತಿಳಿಸಿದ್ದಾರೆ.

ಗೌತಮ್‌ ಗಂಭೀರ್‌ ಅವರಿಗೆ 2022ರಲ್ಲಿಯೂ ಇದೇ ಮಾದರಿಯಲ್ಲಿ ಬೆದರಿಕೆ ಸಂದೇಶ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.