ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಕ್ರಿಕೆಟಿಗ ಯಶ್‌ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

ಪಿಟಿಐ
Published 15 ಜುಲೈ 2025, 10:20 IST
Last Updated 15 ಜುಲೈ 2025, 10:20 IST
<div class="paragraphs"><p>ಯಶ್‌ ದಯಾಳ್‌ </p></div>

ಯಶ್‌ ದಯಾಳ್‌

   

ಪ್ರಯಾಗರಾಜ: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ರಿಕೆಟಿಗ ಯಶ್‌ ದಯಾಳ್‌ ಬಂಧನಕ್ಕೆ ಅಲಹಾಬಾದ್‌ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಎಫ್‌ಐಆರ್‌ ಪ್ರಶ್ನಿಸಿ ದಯಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಅನಿಲ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.‌

ADVERTISEMENT

27 ವರ್ಷದ ದಯಾಳ್ ವಿರುದ್ಧ ಜುಲೈ 6ರಂದು ಗಾಜಿಯಾಬಾದ್ ಜಿಲ್ಲೆಯ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 69ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಐಜಿಆರ್‌ಎಸ್ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಮಹಿಳೆ ದೂರು ನೀಡಿದ್ದರು. ದೂರಿನಲ್ಲಿ ಯಶ್ ಕಳೆದ ಐದು ವರ್ಷಗಳಿಂದ ತನ್ನೊಂದಿಗೆ ಸಂಬಂಧ ಹೊಂದಿದ್ದು, ಲೈಂಗಿಕ ಶೋಷಣೆಗೆ ಗುರಿಯಾಗಿದ್ದೇನೆ ಎಂದು ಆರೋಪಿಸಿದ್ದರು.

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ಚೊಚ್ಚಲ ಟ್ರೋಫಿ ಗೆಲ್ಲುವಲ್ಲಿ ಎಡಗೈ ವೇಗಿ ಯಶ್ ದಯಾಳ್ ಪ್ರಮುಖ ಪಾತ್ರ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.