
ಪದ್ಮನಾಭಸ್ವಾಮಿ ದೇಗುಲಕ್ಕೆ ಟೀಂ ಇಂಡಿಯಾ ಭೇಟಿ
ತಿರುವನಂತಪುರ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಕ್ರಿಕೆಟ್ ಸರಣಿಯ ಕೊನೆಯ ಪಂದ್ಯಕ್ಕೂ ಮುನ್ನ ಭಾರತ ತಂಡದ ಆಟಗಾರರು ಶ್ರೀ ಪದ್ಮನಾಭಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಅಂತಿಮ ಪಂದ್ಯವು ಇಲ್ಲಿನ ಗ್ರೀನ್ ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಟಿ20 ನಾಯಕ ಸೂರ್ಯಕುಮಾರ್ ಯಾದವ್, ಆಲ್‌ರೌಂಡರ್ ಅಕ್ಷರ್ ಪಟೇಲ್, ಬ್ಯಾಟರ್ ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸ್ಪಿನ್ ಬೌಲರ್ ಕುಲದೀಪ್ ಯಾದವ್ ಮತ್ತು ರವಿ ಬಿಷ್ಣೋಯಿ, ಫೀಲ್ಡಿಂಗ್ ಕೋಚ್ ಟಿ.ದಿಲೀಪ್ ಶುಕ್ರವಾರ ಬೆಳಿಗ್ಗೆ ದೇಗುಲಕ್ಕೆ ಭೇಟಿ ನೀಡಿದ್ದರು. ಈ ವೇಳೆ ಎಲ್ಲರೂ ಪಂಚೆ, ಶಲ್ಯ ತೊಟ್ಟು ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ದೇವಾಲಯದ ಆವರಣದಲ್ಲಿ ಆಟಗಾರರು 30 ನಿಮಿಷಗಳಿಗೂ ಹೆಚ್ಚು ಕಾಲ ಸಮಯ ಕಳೆದಿದ್ದಾರೆ.
ನಾಳೆ ಸಂಜೆ 7ಕ್ಕೆ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಭಾರತದ ಈಗಾಗಲೇ 3–1ರಿಂದ ಸರಣಿ ಗೆದ್ದಿದೆ. ಈ ಪಂದ್ಯ ಭಾರತಕ್ಕೆ ಔಪಚಾರಿಕವಾಗಿದ್ದು, ನ್ಯೂಜಿಲೆಂಡ್‌ಗೆ ಇನ್ನೂ ಒಂದು ಪಂದ್ಯ ಗೆದ್ದು ಸರಣಿ ಸೋಲಿನ ಅಂತರವನ್ನು ಕಡಿಮೆ ಮಾಡಿಕೊಳ್ಳುವ ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.