ಕಪ್ಪು ಪಟ್ಟಿ ಧರಿಸಿದ ಭಾರತ ಆಟಗಾರರು
– ಬಿಸಿಸಿಐ ಚಿತ್ರ
ಮೆಲ್ಬರ್ನ್: ತೋಳಿಗೆ ಕಪ್ಪು ಪಟ್ಟಿ ಧರಿಸಿ ಆಡುವ ಮೂಲಕ ಭಾರತ ಕ್ರಿಕೆಟ್ ತಂಡದ ಆಟಗಾರರು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರಿಗೆ ಗೌರವ ಅರ್ಪಿಸಿದರು.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಸರಣಿಯ ನಾಲ್ಕನೇ ಪಂದ್ಯದ ಎರಡನೇ ದಿನಾಟದದಲ್ಲಿ ಭಾರತೀಯ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಕಟ್ಟಿ ಮೈದಾನಕ್ಕಿಳಿದರು.
‘ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಗೌರವಾರ್ಥವಾಗಿ ಭಾರತ ತಂಡದ ಆಟಗಾರರು ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದಾರೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
92 ವರ್ಷದ ಮನಮೋಹನ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯಸಿರೆಳೆದರು. ಭಾರತ ಆರ್ಥಿಕತೆಯಲ್ಲಿ ಅಪೂರ್ವ ಬದಲಾವಣೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.