ನವದೆಹಲಿ: ಇತ್ತೀಚಿಗಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಐಸಿಸಿ ಮಹಿಳಾ ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿದೆ. ಮಹಿಳಾ ಕ್ರಿಕೆಟ್ ತಂಡದ ಭಾಗವಾಗಿದ್ದ ಬ್ಯಾಟರ್ ಪ್ರತೀಕಾ ರಾವಲ್ ಅವರನ್ನು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಗುಪ್ತಾ ಅವರು ಜನ ಸೇವಾ ಸದನದಲ್ಲಿ ರಾವಲ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾವಲ್ ಅವರಿಗೆ ಸರ್ಕಾರದಿಂದ ₹1.5 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರೇಖಾ ಗುಪ್ತಾ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರತಿಭಾನ್ವಿತ ಯುವ ಆಟಗಾರ್ತಿ ಪ್ರತೀಕಾ ರಾವಲ್ ಅವರಿಗೆ ಅಭಿನಂದನೆ ಸಲ್ಲಿಸಿದ್ದೇವೆ. ಪ್ರತೀಕಾ ದೆಹಲಿಯ ಹೆಮ್ಮೆ. ಕ್ರೀಡೆಯ ಬಗೆಗಿನ ಅವರ ಬದ್ಧತೆ ಮತ್ತು ಅತ್ಯುತ್ತಮ ಪ್ರದರ್ಶನವನ್ನು ಗುರುತಿಸಿ, ದೆಹಲಿ ಸರ್ಕಾರ ಅವರಿಗೆ ₹1.5 ಕೋಟಿ ಬಹುಮಾನ ನೀಡುವುದಾ
ರಾವಲ್ ಅವರ ಧೈರ್ಯ, ಶಕ್ತಿ ಯುವತಿಯರಿಗೆ ಸ್ಫೂರ್ತಿದಾಯಕವಾದದ್ದು, ಅವರ ಉಜ್ವಲ ಭವಿಷ್ಯಕ್ಕಾಗಿ ಹೃತ್ಪೂರ್ವಕ ಶುಭಾಶಯಗಳು ಎಂದು ಗುಪ್ತಾ ಹೇಳಿದ್ದಾರೆ.
ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ರಾವಲ್ ಆಡಿದ್ದ 6 ಇನಿಂಗ್ಸ್‌ಗಳಲ್ಲಿ 51.33 ಸರಾಸರಿಯಲ್ಲಿ 308 ರನ್‌ಗಳು ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.