ADVERTISEMENT

ಕ್ರಿಕೆಟ್‌: ಅಭ್ಯಾಸ ಪಂದ್ಯ ರದ್ದು

ಪಿಟಿಐ
Published 16 ಫೆಬ್ರುವರಿ 2020, 19:45 IST
Last Updated 16 ಫೆಬ್ರುವರಿ 2020, 19:45 IST

ಬ್ರಿಸ್ಬೇನ್: ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿದ್ದ ಟ್ವೆಂಟಿ–20ವಿಶ್ವಕಪ್‌ ಟೂರ್ನಿಯ ಅಭ್ಯಾಸ ಪಂದ್ಯ ಭಾನುವಾರ ಭಾರೀ ಮಳೆಯ ಕಾರಣ ಒಂದೂ ಎಸೆತ ಕಾಣದೆ ರದ್ದಾಗಿದೆ. ಇದರಿಂದ ಹರ್ಮನ್‌ಪ್ರೀತ್‌ ಪಡೆಯ ಅಭ್ಯಾಸಕ್ಕೆ ಅಡ್ಡಿಯಾಗಿದೆ.

ಫೆಬ್ರುವರಿ 18ರಂದು ನಡೆಯುವ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ಮಹಿಳೆಯರು ವೆಸ್ಟ್‌ ವಿಂಡೀಸ್‌ ವಿರುದ್ಧ ಸೆಣಸಲಿದ್ದಾರೆ.

ಇದೇ 21ರಿಂದ ವಿಶ್ವಕಪ್‌ ಆರಂಭವಾಗಲಿದ್ದು, ಹರ್ಮನ್‌ಪ್ರೀತ್‌ ಪಡೆಯು ಹಾಲಿ ಚಾಂಪಿಯನ್‌ ಹಾಗೂ ನಾಲ್ಕು ಬಾರಿ ವಿಶ್ವಕಪ್‌ ವಿಜೇತ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಹಣಾಹಣಿ ಸಿಡ್ನಿಯಲ್ಲಿ ನಡೆಯಲಿದೆ.

ADVERTISEMENT

ಆಡಿಲೇಡ್‌ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವು ನ್ಯೂಜಿಲೆಂಡ್‌ ತಂಡವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.