ನವದೆಹಲಿ: ಯುವಪ್ರತಿಭೆಗಳಾದ ಋತುರಾಜ್ ಗಾಯಕವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರಿಗೆ ಭಾರತ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಸ್ಥಾನ ಲಭಿಸಿದೆ. ಪರಿಣತ ಬ್ಯಾಟರ್ ಚೇತೇಶ್ವರ್ ಪೂಜಾರ ಹಾಗೂ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕೈಬಿಡಲಾಗಿದೆ.
ಜುಲೈ 12ರಿಂದ ಭಾರತ ತಂಡವು ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿದೆ. ಅದರಲ್ಲಿ ನಡೆಯುವ ಟೆಸ್ಟ್ ಮತ್ತು ಏಕದಿನ ಸರಣಿಗಳಲ್ಲಿ ಆಡುವ ತಂಡಗಳನ್ನು ಶುಕ್ರವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಪ್ರಕಟಿಸಿದೆ.
ಉಭಯ ಸರಣಿಗಳಲ್ಲಿಯೂ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವರು. ಅಜಿಂಕ್ಯ ರಹಾನೆ ಉಪನಾಯಕರಾಗಿದ್ದಾರೆ.
ಯುವ ಬೌಲರ್ ಮುಕೇಶ್ ಕುಮಾರ್ ಅವರಿಗೂ ತಂಡದಲ್ಲಿ ಸ್ಥಾನ ಲಭಿಸಿದೆ. ಮೊಹಮ್ಮದ್ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ನವದೀಪ್ ಸೈನಿ ತಂಡಕ್ಕೆ ಮರಳಿದ್ದಾರೆ. ಕೇರಳದ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಿದೆ. ಇಶಾನ್ ಕಿಶನ್ ಎರಡೂ ಮಾದರಿಗಳ ತಂಡಗಳಲ್ಲಿದ್ದಾರೆ. ಟೆಸ್ಟ್‌ಗೆ ಕೆ.ಎಸ್. ಭರತ್ ಅವರಿಗೆ ಸ್ಥಾನ ನೀಡಲಾಗಿದೆ.
ಟೆಸ್ಟ್ ಸರಣಿಯಲ್ಲಿ ಎರಡು ಮತ್ತು ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ಈಚೆಗೆ ಲಂಡನ್‌ನ ದ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ಎದುರು ಸೋತಿತ್ತು.
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪ ನಾಯಕ), ಕೆ.ಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.
ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನದ್ಕಟ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.