ADVERTISEMENT

ಭಾರತ–ಪಾಕ್ ಕ್ರಿಕೆಟ್ ಪಂದ್ಯ ನಡೆಯಲಿ: ಪ್ರಕಾಶ್ ಪಡುಕೋಣೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 15:40 IST
Last Updated 19 ಅಕ್ಟೋಬರ್ 2021, 15:40 IST
ಮುಂಬೈನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾಡ್ಮಿಂಟನ್ ಆಡಿದ ಪ್ರಕಾಶ್ ಪಡುಕೋಣೆ  –ಪಿಟಿಐ ಚಿತ್ರ
ಮುಂಬೈನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾಡ್ಮಿಂಟನ್ ಆಡಿದ ಪ್ರಕಾಶ್ ಪಡುಕೋಣೆ  –ಪಿಟಿಐ ಚಿತ್ರ   

ಮುಂಬೈ: ಟ್ವೆಂಟಿ–20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಣ ಪಂದ್ಯವು ನಡೆಯಬೇಕು ಎಂದು ದಿಗ್ಗಜ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅಭಿಪ್ರಾಯಪಟ್ಟಿದ್ದಾರೆ.

ಇದೇ 24ರಂದು ಭಾರತ ಮತ್ತು ಪಾಕ್ ತಂಡಗಳು ವಿಶ್ವಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಲಿವೆ. ಆದರೆ ಈಚೆಗೆ ಜಮ್ಮು–ಕಾಶ್ಮೀರದಲ್ಲಿ ಭಯೋತ್ಪಾದನೆ ದಾಳಿ ನಡೆದಿದ್ದು, ಪಾಕ್ ಪ್ರಚೋದನೆ ಇದರ ಹಿಂದಿದೆ. ಆದ್ದರಿಂದ ಕ್ರಿಕೆಟ್‌ ಪಂದ್ಯ ನಡೆಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಯುತ್ತಿದೆ.

ಮಂಗಳವಾರ ನ್ಯಾಷನ್‌ ಸ್ಪೋರ್ಟ್ಸ್‌ ಕ್ಲಬ್ ಆಫ್‌ ಇಂಡಿಯಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಕಾಶ್, ‘ರಾಜಕೀಯ ಮತ್ತು ಕ್ರೀಡೆಯನ್ನು ಬೆರೆಸಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಪಂದ್ಯವು ತನ್ನ ಪಾಡಿಗೆ ನಡೆಯಬೇಕು. ಆದರೂ ನಾನು ಈ ಕುರಿತು ಮಾತನಾಡಲು ಅಧಿಕೃತ ವ್ಯಕ್ತಿಯಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ’ ಎಂದಿದ್ದಾರೆ.

ADVERTISEMENT

ಕಾಶ್ಮೀರ ಕಣಿವೆಯಲ್ಲಿ ಈ ತಿಂಗಳು 11 ನಾಗರಿಕರನ್ನು ಭಯೋತ್ಪಾದಕರು ಹತ್ಯೆ ಮಾಡಿರುವ ವರದಿಯಾಗಿದೆ. ಹೋದ ಭಾನುವಾರ ಉಗ್ರರ ದಾಳಿಯಲ್ಲಿ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮೃತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.