ಸ್ಫೋಟಕ ಶತಕ ಸಿಡಿಸಿದ ಬೆತ್ ಮೂನಿ
ನವದೆಹಲಿ: ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ನಿರ್ಣಾಯಕ ಹಾಗೂ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ ಬೆತ್ ಮೂನಿ ಸ್ಫೋಟಕ ಶತಕ ಸಿಡಿಸಿ ಮಿಂಚಿದರು.
ದೆಹಲಿಯ ಅರುಣ್ ಜೇಟ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮಹಿಳಾ ತಂಡದ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ಬೆತ್ ಮೂನಿ ಕೇವಲ 57 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಅಂತರರಾಷ್ಟ್ರೀಯ ಏಕದಿನ ಮಹಿಳಾ ಕ್ರಿಕೆಟ್‌ನಲ್ಲಿ ಮೂರನೇ ಅತೀ ವೇಗದ ಶತಕ ಸಿಡಿಸಿದ ದಾಖಲೆ ಬರೆದರು.
ಇದಕ್ಕೂ ಮೊದಲು 2012 ರಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನ್ನಿಂಗ್ ನ್ಯೂಜಿಲ್ಯಾಂಡ್ ವಿರುದ್ಧ ಕೇವಲ 45 ಎಸೆತಗಳಲ್ಲಿ ಶತಕ ಸಿಡಿಸಿದ್ದರು.
ಆಸ್ಟ್ರೇಲಿಯಾದ ಕರೇನ್ ರೋಲ್ಟನ್ 57 ಎಸೆತಗಳಲ್ಲಿ ಸೌತ್ ಆಫ್ರಿಕಾ ವಿರುದ್ಧ ಶತಕ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಇಂದಿನ ಪಂದ್ಯದಲ್ಲಿ ಇಷ್ಟೇ ಎಸೆತಗಳಲ್ಲಿ ಶತಕ ಸಿಡಿಸಿರುವ ಬೆತ್ ಮೂನಿ ರೋಲ್ಟನ್ ಜೊತೆಗೆ ಜಂಟಿ ಎರಡನೇ ವೇಗದ ಶತಕ ಸಿಡಿಸಿದ ಸಾಧನೆ ಮಾಡಿದರು.
ಸೋಫಿಯಾ ಡಿವೈನ್ 59 ಎಸೆತಗಳಲ್ಲಿ ಹಾಗೂ ಚಾಮರಿ ಅಟ್ಟಪಟ್ಟು 60 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಕ್ರಮವಾಗಿ ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.
ಬೆತ್ ಮೂನಿ ಸಿಡಿಸಿದ ಇಂದಿನ ಶತಕ ಭಾರತ ಮಹಿಳಾ ತಂಡದ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ದಾಖಲಾದ ಅತೀ ವೇಗದ ಶತಕ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಅಂತಿಮವಾಗಿ ಅವರು ಕೇವಲ 75 ಎಸೆತಗಳಲ್ಲಿ 23 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 138 ರನ್ ಸಿಡಿಸಿ ಔಟ್ ಆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.