ADVERTISEMENT

ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದ ಕೆಕೆಆರ್‌: ಬೌಲಿಂಗ್‌ ಆಯ್ಕೆ 

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2019, 14:44 IST
Last Updated 5 ಏಪ್ರಿಲ್ 2019, 14:44 IST
   

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್‌ ಗೆದ್ದಿರುವ ಕೋಲ್ಕತ್ತ ನೈಟ್ ರೈಡರ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಟೂರ್ನಿಯ ಆರಂಭದಿಂದಲೇ ಸೋಲಿನ ಕಹಿ ಉಂಡಿರುವಆರ್‌ಸಿಬಿ ಯುಗಾದಿ ಹಬ್ಬಕ್ಕಾದರೂ ತನ್ನ ಅಭಿಮಾನಿಗಳಿಗೆ ಗೆಲುವಿನ ಸಿಹಿ ಬೆಲ್ಲ ನೀಡುವುದೇ? ಆದರೆ ಜಯ ಸುಲಭವಲ್ಲ. ಮದಗಜದಂತೆ ಆರ್ಭಟಿಸುತ್ತಿರುವ ಆ್ಯಂಡ್ರೆ ರಸೆಲ್, ಬೆಂಗಳೂರಿನ ಅಂಗಳದಲ್ಲಿಯೇ ಬೆಳೆದ ರಾಬಿನ್ ಉತ್ತಪ್ಪ ಮತ್ತು ಮಧ್ಯಮವೇಗಿ ಪ್ರಸಿದ್ಧ ಕೃಷ್ಣ ಅವರ ಬಲ ಕೆಕೆಆರ್‌ ತಂಡಕ್ಕಿದೆ. ತಂಡವು ಈಗಾಗಲೇ ಆಡಿರುವ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದಿದೆ.

ವಿಶ್ವದ ಅಗ್ರ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್‌ನಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಆದರೆ, ಇದುವರೆಗೂ ಒಂದೇ ಒಂದು ಸಿಕ್ಸರ್‌ ಕೂಡ ಸಿಡಿಸಿಲ್ಲ. ಅವರ ನಾಯಕತ್ವದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಪಂದ್ಯವನ್ನೂ ಜಯಿಸಿಲ್ಲ!
ಉದ್ಯಾನನಗರಿಯ ಪಿಚ್‌ನಲ್ಲಿ ರನ್‌ಗಳು ಭರಪೂರ ಹರಿಯುವ ನಿರೀಕ್ಷೆ ಇದೆ.

ADVERTISEMENT

ತಂಡಗಳು ಇಂತಿವೆ
ರಾಯಲ್ ಚಾಲೆಂಜರ್ಸ್‌ ಬೆಂಗಳೂರು:
ವಿರಾಟ್ ಕೊಹ್ಲಿ (ನಾಯಕ), ಪಾರ್ಥಿವ್ ಪಟೇಲ್ (ವಿಕೆಟ್‌ಕೀಪರ್), ಎಬಿ ಡಿವಿಲಿಯರ್ಸ್, ಮೊಯಿನ್ ಅಲಿ, ಶಿಮ್ರೊನ್ ಹೆಟ್ಮೆಯರ್, ಶಿವಂ ದುಬೆ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಉಮೇಶ್ ಯಾದವ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಪವನ್ ನೇಗಿ, ವಾಷಿಂಗ್ಟನ್ ಸುಂದರ್, ಟಿಮ್ ಸೌಥಿ, ಗುರುಕೀರತ್ ಸಿಂಗ್ ಮಾನ್, ಹೆನ್ರಿಚ್ ಕ್ಲಾಸನ್, ಅಕ್ಷದೀಪ್ ನಾಥ್, ಕುಲವಂತ ಖೆಜ್ರೋಲಿಯಾ.

ಕೋಲ್ಕತ್ತ ನೈಟ್ ರೈಡರ್ಸ್: ದಿನೇಶ್ ಕಾರ್ತಿಕ್ (ನಾಯಕ), ರಾಬಿನ್ ಉತ್ತಪ್ಪ, ಕ್ರಿಸ್ ಲಿನ್, ಶುಭಮನ್ ಗಿಲ್, ಆ್ಯಂಡ್ರೆ ರಸೆಲ್, ಕಾರ್ಲೋಸ್ ಬ್ರಾಥ್‌ವೈಟ್, ಸುನಿಲ್ ನಾರಾಯಣ್, ಪಿಯೂಷ್ ಚಾವ್ಲಾ, ಕುಲದೀಪ್ ಯಾದವ್, ನಿಖಿಲ್ ನಾಯಕ, ಜೋ ಡೆನ್ಲಿ, ಶ್ರೀಕಾಂತ್ ಮುಂಢೆ, ನಿತೀಶ್ ರಾಣಾ, ಸಂದೀಪ್ ವರಿಯರ್, ಪ್ರಸಿದ್ಧ ಕೃಷ್ಣ, ಲಾಕಿ ಫರ್ಗ್ಯುಸನ್, ಹ್ಯಾರಿ ಗರ್ನೀ, ಕೆ.ಸಿ. ಕಾರಿಯಪ್ಪ , ಯರ್ರಾ ಪೃಥ್ವಿರಾಜ್.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.