ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರುದ್ಧ ಹೈದರಾಬಾದ್ ಬೃಹತ್ ಮೊತ್ತ ಪೇರಿಸಿದೆ.
ಸನ್‌ರೈಸರ್ಸ್ ಎದುರು ಟಾಸ್ ಗೆದ್ದಿರುವ ಕೊಹ್ಲಿ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.
ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಜಾನಿ ಬೆಸ್ಟೊ (114), ಡೇವಿಡ್ ವಾರ್ನರ್ (100*) ಅವರ ಶತಕದ ಬಲದಿಂದ 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 231 ರನ್ ಗಳಿಸಿದೆ.
ಆರ್‌ಸಿಬಿ ಪರ ಯಜುವೇಂದ್ರ ಚಾಹಲ್ 1 ವಿಕೆಟ್ ಪಡೆದರು.
ಸದ್ಯ ಬ್ಯಾಟಿಂಗ್ ಆರಂಭಿಸಿರುವ ಆರ್‌ಸಿಬಿ 6.2 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 30 ರನ್ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.