ADVERTISEMENT

IPL 2022| ಆರ್‌ಸಿಬಿ Vs ಆರ್‌ಆರ್‌: ಟಾಸ್‌ ಗೆದ್ದ ರಾಜಸ್ಥಾನ, ಫೀಲ್ಡಿಂಗ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಮೇ 2022, 14:03 IST
Last Updated 27 ಮೇ 2022, 14:03 IST
ಪಂದ್ಯ ವೀಕ್ಷಣೆಗೆ ನೆರೆದ ಕ್ರಿಕೆಟ್‌ ಅಭಿಮಾನಿಗಳು, ಪಿಟಿಐ ಚಿತ್ರ
ಪಂದ್ಯ ವೀಕ್ಷಣೆಗೆ ನೆರೆದ ಕ್ರಿಕೆಟ್‌ ಅಭಿಮಾನಿಗಳು, ಪಿಟಿಐ ಚಿತ್ರ   

ಅಹಮದಾಬಾದ್‌: ಐಪಿಎಲ್‌ 2022ರ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ರಾಜಸ್ಥಾನ ರಾಯಲ್ಸ್‌ ತಂಡವು ಟಾಸ್‌ ಗೆದ್ದು, ಫೀಲ್ಡಿಂಗ್‌ ಆಯ್ಕೆ ಮಾಡಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ ಪ್ರವೇಶಿಸಿ, ಗುಜರಾತ್‌ ಟೈಟನ್ಸ್‌ ತಂಡವನ್ನು ಎದುರಿಸಲಿದೆ.

ಎಲಿಮಿನೇಟರ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ರಜತ್‌ ಪಾಟೀದಾರ್‌ ಅವರ ಶತಕದ ನೆರವಿನಿಂದ ಬೆಂಗಳೂರು ತಂಡ ಜಯಭೇರಿ ಬಾರಿಸಿತ್ತು.

ತಂಡದ 11ರ ಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ADVERTISEMENT

ರಾಜಸ್ಥಾನ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಆರ್. ಅಶ್ವಿನ್, ಟ್ರೆಂಟ್ ಬೌಲ್ಟ್, ಶಿಮ್ರಾನ್ ಹೆಟ್ಮೆಯರ್, ದೇವದತ್ತ ಪಡಿಕ್ಕಲ್, ಪ್ರಸಿದ್ಧಕೃಷ್ಣ, ಯಜುವೇಂದ್ರ ಚಾಹಲ್, ರಿಯಾನ್ ಪರಾಗ್, ಕೆಸಿ. ಕಾರ್ಯಪ್ಪ, ಕುಲದೀಪ್ ಯಾದವ್, ನವದೀಪ್ ಸೈನಿ, ಒಬೆದ್ ಮೆಕಾಯ್, ಅನುನಯ ಸಿಂಗ್, ಕುಲದೀಪ್ ಸೇನ್, ಕರುಣ್ ನಾಯರ್, ಧ್ರುವ ಜುರೇಲ್, ತೇಜಸ್ ಬರೂಕಾ, ಜೇಮ್ಸ್ ನಿಶಾಮ್, ನೇಥನ್ ಕೌಲ್ಟರ್‌ ನೈಲ್, ರಸಿ ವ್ಯಾನ್ ಡರ್ ಡಸೆನ್, ಡೆರಿಲ್ ಮಿಚೆಲ್, ಕಾರ್ಬಿನ್ ಬಾಷ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಫ್ ಡುಪ್ಲೆಸಿ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟೀದಾರ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ವಣಿಂದು ಹಸರಂಗಾ, ದಿನೇಶ್ ಕಾರ್ತಿಕ್, ಜೋಷ್ ಹೇಜಲ್‌ವುಡ್, ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಶೆರ್ಫೆನ್ ರುದರ್‌ಫೋರ್ಡ್, ಜೇಸನ್ ಬೆಹ್ರನ್‌ಡಾರ್ಫ್‌, ಸುಯಶ್ ಪ್ರಭುದೇಸಾಯಿ, ಚಾಮಾ ಮಿಲಿಂದ್, ಅನೀಶ್ವರ್ ಗೌತಮ್, ಕರ್ಣ ಶರ್ಮಾ, ಡೇವಿಡ್ ವಿಲಿ, ಸಿದ್ಧಾರ್ಥ್ ಕೌಲ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.