ADVERTISEMENT

IPL 2021: ರೈನಾ 32 ಬಾಲ್ ಫಿಫ್ಟಿ; ಧೋನಿ ಡಕ್ ಔಟ್!

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 16:09 IST
Last Updated 10 ಏಪ್ರಿಲ್ 2021, 16:09 IST
ಸುರೇಶ್ ರೈನಾ, ಎಂ.ಎಸ್. ಧೋನಿ
ಸುರೇಶ್ ರೈನಾ, ಎಂ.ಎಸ್. ಧೋನಿ   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಮುಂಬೈನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅನುಭವಿ ಆಟಗಾರ ಸುರೇಶ್ ರೈನಾ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಈ ನಡುವೆ ಶೂನ್ಯಕ್ಕೆ ಔಟ್ ಆದ ನಾಯಕ ಮಹೇಂದ್ರ ಸಿಂಗ್ ಧೋನಿ ನಿರಾಸೆ ಮೂಡಿಸಿದ್ದಾರೆ.

ಧೋನಿ ಹಾಗೂ ರೈನಾ ಬ್ಯಾಟಿಂಗ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾದು ಕುಳಿತಿದ್ದರು. ಈ ಪೈಕಿ ರೈನಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ಏಳನೇ ಕ್ರಮಾಂಕದಲ್ಲಿ ಕ್ರೀಸಿಗಿಳಿದ ಧೋನಿ, ಅಭಿಮಾನಿಗಳ ನಿರೀಕ್ಷೆಗಳನ್ನು ಹುಸಿಗೊಳಿಸಿದರು.

ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಧೋನಿ ಹಾಗೂ ರೈನಾ ಐಪಿಎಲ್‌ನಲ್ಲಿ ಮಾತ್ರ ತಮ್ಮ ಸೇವೆಯನ್ನು ಮುಂದುವರಿಸಿದ್ದಾರೆ. ಕಳೆದ ವರ್ಷ ಯುಎಇನಲ್ಲಿ ನಡೆದ ಟೂರ್ನಿಯಲ್ಲಿ ರೈನಾ ಭಾಗವಹಿಸಿರಲಿಲ್ಲ.

ಈ ಬಾರಿ ಮೊದಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ಎದುರಾಳಿಗಳಿಗೆ ಸ್ಪಷ್ಟವಾದ ಸಂದೇಶ ರವಾನಿಸಿದ್ದಾರೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾರ್ವಕಾಲಿಕ ಶ್ರೇಷ್ಠ ಪಟ್ಟಿಯಲ್ಲಿ ಸುರೇಶ್ ರೈನಾ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನೊಂದೆಡೆ ಪುನರಾಗಮನದ ಪಂದ್ಯದಲ್ಲಿ ಧೋನಿ ವೈಫಲ್ಯವನ್ನು ಅನುಭವಿಸಿದ್ದಾರೆ. ಆವೇಶ್ ಖಾನ್ ದಾಳಿಯಲ್ಲಿ ಕ್ಲೀನ್ ಬೌಲ್ಡ್ ಆದರು. ಒಟ್ಟಾರೆಯಾಗಿ ಐಪಿಎಲ್‌ನಲ್ಲಿ ನಾಲ್ಕನೇ ಬಾರಿಗೆ ಧೋನಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

ಐಪಿಎಲ್‌ನಲ್ಲಿ ಶೂನ್ಯದ ಸುರುಳಿ ಸುತ್ತಿದ ಧೋನಿ:
0(1), ರಾಜಸ್ಥಾನ ವಿರುದ್ಧ, 2010ರಲ್ಲಿ, ಚೆನ್ನೈ
0(2), ಡೆಲ್ಲಿ ವಿರುದ್ಧ, 2010, ಚೆನ್ನೈ
0(1), ಮುಂಬೈ ವಿರುದ್ಧ, ಮುಂಬೈ, 2015
0(2) ಡೆಲ್ಲಿ ವಿರುದ್ಧ, ಮುಂಬೈ, 2021

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.