ADVERTISEMENT

IPL 2021: ರೈನಾ ಮೈಲಿಗಲ್ಲು; ಐಪಿಎಲ್‌ನಲ್ಲಿ 200 ಸಿಕ್ಸರ್‌ಗಳ ಸರದಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಏಪ್ರಿಲ್ 2021, 16:22 IST
Last Updated 25 ಏಪ್ರಿಲ್ 2021, 16:22 IST
   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ, ಮಗದೊಂದು ಸ್ಮರಣೀಯ ದಾಖಲೆ ಬರೆದಿದ್ದಾರೆ.

ಐಪಿಎಲ್‌ನಲ್ಲಿ ಟೂರ್ನಿಯಲ್ಲಿ 200 ಸಿಕ್ಸರ್‌ಗಳನ್ನು ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಎಲೀಟ್ ಪಟ್ಟಿಗೆ ರೈನಾ ಸೇರ್ಪಡೆಯಾಗಿದ್ದಾರೆ. ಐಪಿಎಲ್‌ನಲ್ಲಿ 200 ಸಿಕ್ಸರ್‌ಗಳನ್ನು ಗಳಿಸಿದ ಏಳನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ರೈನಾ, ಈ ಮೈಲಿಗಲ್ಲು ತಲುಪಿದ್ದಾರೆ.

ADVERTISEMENT

ಕೇವಲ 18 ಎಸೆತಗಳನ್ನು ಎದುರಿಸಿದ ರೈನಾ ಒಂದು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 24 ರನ್ ಗಳಿಸಿ ಔಟಾದರು.

ಈ ಪಟ್ಟಿಯನ್ನು ಮುನ್ನಡೆಸುತ್ತಿರುವ ವೆಸ್ಟ್‌ಇಂಡೀಸ್‌ನ ದೈತ್ಯ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ 354 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಭಾರತೀಯರ ಆಟಗಾರರ ಪೈಕಿ ಮುಂಚೂಣಿಯಲ್ಲಿ ರೋಹಿತ್ ಶರ್ಮಾ 222 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ಸರದಾರರು:
1. ಕ್ರಿಸ್ ಗೇಲ್ (354)
2. ಎಬಿ ಡಿ ವಿಲಿಯರ್ಸ್ (240)
3. ರೋಹಿತ್ ಶರ್ಮಾ (222)
4. ಮಹೇಂದ್ರ ಸಿಂಗ್ ಧೋನಿ (217)
5. ವಿರಾಟ್ ಕೊಹ್ಲಿ (204)
6. ಕೀರಾನ್ ಪೊಲಾರ್ಡ್ (202)
7. ಸುರೇಶ್ ರೈನಾ (200)
8. ಡೇವಿಡ್ ವಾರ್ನರ್ (199)
9. ಶೇನ್ ವಾಟ್ಸನ್ (190)
10. ರಾಬಿನ್ ಉತ್ತಪ್ಪ (163)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.