ADVERTISEMENT

IPL 2021: ಟಿ20 ಕ್ರಿಕೆಟ್‌ನಲ್ಲಿ ರಾಹುಲ್ ಸಿಕ್ಸರ್‌ಗಳ ಡಬಲ್ ಸೆಂಚುರಿ..!

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 18:04 IST
Last Updated 23 ಏಪ್ರಿಲ್ 2021, 18:04 IST
   

ಚೆನ್ನೈ: ಟ್ವೆಂಟಿ-20 ಕ್ರಿಕೆಟ್ ಇತಿಹಾಸದಲ್ಲೇ 200 ಶತಕಗಳನ್ನು ಸಿಡಿಸಿದ ಎಲೀಟ್ ಪಟ್ಟಿಗೆ ಕರ್ನಾಟಕದ ಕೆ.ಎಲ್. ರಾಹುಲ್ ಸೇರ್ಪಡೆಯಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿರುವ ರಾಹುಲ್, ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಈ ಸ್ಮರಣೀಯ ದಾಖಲೆ ಬರೆದಿದ್ದಾರೆ.

ರಾಹುಲ್ ದ್ವಿಶತಕಗಳ ಸಿಕ್ಸರ್‌ಗಳ ಸಾಲಿನಲ್ಿ ಐಪಿಎಲ್‌ನಲ್ಲಿ ಸಿಡಿಸಿದ 114 ಸಿಕ್ಸರ್‌ಗಳು ಒಳಗೊಂಡಿವೆ.

ADVERTISEMENT

ಅಂದ ಹಾಗೆ ಟಿ20 ಇತಿಹಾಸದಲ್ಲೇ ಸಹಸ್ರ ಸಿಕ್ಸರ್ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎಂಬ ಖ್ಯಾತಿಯು ಯೂನಿವರ್ಸ್ ಬಾಸ್ ಖ್ಯಾತಿಯ ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್ ಅವರಿಗೆ ಸಲ್ಲುತ್ತದೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಗೇಲ್ ಎರಡು ಸಿಕ್ಸರ್‌ಗಳನ್ನು ಸಿಡಿಸಿದ್ದರು.

ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಆರು ವಿಕೆಟ್ ನಷ್ಟಕ್ಕೆ 131 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಬಳಿಕ ನಾಯಕನ ಆಟವಾಡಿದ ರಾಹುಲ್, ಮಯಂಕ್ ಹಾಗೂ ಗೇಲ್ ಜೊತೆಗೆ ಆಕರ್ಷಕ ಜೊತೆಯಾಟದಲ್ಲಿ ಭಾಗಿಯಾಗುವ ಮೂಲಕ ಗೆಲುವಿನ ರೂವಾರಿ ಎನಿಸಿದರು.

52 ಎಸೆತಗಳನ್ನು ಎದುರಿಸಿದ ರಾಹುಲ್ ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ 60 ರನ್ ಗಳಿಸಿ ಔಟಾಗದೆ ಉಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.