ADVERTISEMENT

IPL 2021 | RCB vs MI: ಹರ್ಷಲ್ 'ಹ್ಯಾಟ್ರಿಕ್'; ಮುಂಬೈ ವಿರುದ್ಧ ಆರ್‌ಸಿಬಿಗೆ ಭರ್ಜರಿ ಗೆಲುವು

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 'ಹ್ಯಾಟ್ರಿಕ್' ಸೇರಿದಂತೆ ನಾಲ್ಕು ವಿಕೆಟ್ ಪಡೆದ ಹರ್ಷಲ್ ಪಟೇಲ್ ಆರ್‌ಸಿಬಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಸಹ ಅರ್ಧಶತಕಗಳ ಸಾಧನೆ ಮಾಡಿದರು.

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 18:35 IST
Last Updated 26 ಸೆಪ್ಟೆಂಬರ್ 2021, 18:35 IST

ಕೊಹ್ಲಿ 10,000 ರನ್ ಮೈಲಿಗಲ್ಲು- ಹರ್ಷಲ್ ಪಟೇಲ್ 'ಹ್ಯಾಟ್ರಿಕ್' ಗರಿ

ಹರ್ಷಲ್ ಪಟೇಲ್ 'ಹ್ಯಾಟ್ರಿಕ್' ಮ್ಯಾಜಿಕ್

ಮುಂಬೈ ವಿರುದ್ಧ ಆರ್‌ಸಿಬಿಗೆ ಅವಿಸ್ಮರಣೀಯ ಗೆಲುವು

ಆರ್‌ಸಿಬಿ ವಿಜಯೋತ್ಸವ

ಹರ್ಷಲ್ ಪಟೇಲ್ 'ಹ್ಯಾಟ್ರಿಕ್'; ಆರ್‌ಸಿಬಿಗೆ ಗೆಲುವು

ಆರ್‌ಸಿಬಿಗೆ 54 ರನ್ ಅಂತರದ ಭರ್ಜರಿ ಗೆಲುವು

ಮೊದಲು ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಅರ್ಧಶತಕಗಳ ಅಬ್ಬರ ಬಳಿಕ ಹರ್ಷಲ್ ಪಟೇಲ್ 'ಹ್ಯಾಟ್ರಿಕ್' ವಿಕೆಟ್ (17ಕ್ಕೆ 4 ವಿಕೆಟ್) ಸಾಧನೆಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. 

ADVERTISEMENT

ಇದರೊಂದಿಗೆ ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ ಎರಡನೇ ಹಂತದ ಟೂರ್ನಿಯಲ್ಲಿ ಸತತ ಎರಡು ಸೋಲಿನ ಬಳಿಕ ವಿರಾಟ್ ಕೊಹ್ಲಿ ಬಳಗವು ಗೆಲುವಿನ ಹಾದಿಗೆ ಮರಳಿದೆ. 

ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ಆರು ವಿಕೆಟ್ ನಷ್ಟಕ್ಕೆ 165 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಬಳಿಕ 'ಹ್ಯಾಟ್ರಿಕ್' ಸೇರಿದಂತೆ ನಾಲ್ಕು ವಿಕೆಟ್ ಕಿತ್ತ ಹರ್ಷಲ್ ದಾಳಿಗೆ ನಲುಕಿದ ಮುಂಬೈ 18.1 ಓವರ್‌ಗಳಲ್ಲಿ 111 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಯಜುವೇಂದ್ರ ಚಾಹಲ್ ಮೂರು ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಎರಡು ವಿಕೆಟ್ ಕಿತ್ತು ಮಿಂಚಿದರು. 

ಹರ್ಷಲ್ ಪಟೇಲ್ ಹ್ಯಾಟ್ರಿಕ್ ಸಾಧನೆ

ಮುಂಬೈ 5ನೇ ವಿಕೆಟ್ ಪತನ

ರೋಹಿತ್ ವಿಕೆಟ್ ಪಡೆದ ಮ್ಯಾಕ್ಸ್‌ವೆಲ್

ಇಶಾನ್ ಕಿಶನ್ ವಿಕೆಟ್ ಪಡೆದ ಚಾಹಲ್

10 ಓವರ್ ಅಂತ್ಯಕ್ಕೆ ಮುಂಬೈ 79/2

ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಜೊತೆಯಾಟವನ್ನು ಯಜುವೇಂದ್ರ ಚಾಹಲ್ ಮುರಿದರು. 24 ರನ್ ಗಳಿಸಿದ ಡಿ ಕಾಕ್, ಚಾಹಲ್ ದಾಳಿಯಲ್ಲಿ ಕ್ಯಾಚಿತ್ತು ನಿರ್ಗಮಿಸಿದರು.  

ಈ ನಡುವೆ ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ ದೊಡ್ಡ ಹೊಡೆತಕ್ಕೆ ಮುಂದಾಗಿ ಔಟಾದರು. 28 ಎಸೆತಗಳನ್ನು ಎದುರಿಸಿದ ರೋಹಿತ್ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರು. 10 ಓವರ್ ಅಂತ್ಯಕ್ಕೆ ಮುಂಬೈ ಎರಡು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು. ಅಂತಿಮ 60 ಎಸೆತಗಳಲ್ಲಿ ಗೆಲುವಿಗೆ 87 ರನ್‌ಗಳ ಅವಶ್ಯಕತೆಯಿತ್ತು. 

ರೋಹಿತ್-ಡಿ ಕಾಕ್ ಜೊತೆಯಾಟ ಮುರಿದ ಚಾಹಲ್

ರೋಹಿತ್ ಹ್ಯಾಟ್ರಿಕ್ ಬೌಂಡರಿ

ರೋಹಿತ್, ಡಿ ಕಾಕ್ ಬಿರುಸಿನ ಆಟ

ಸವಾಲಿನ ಮೊತ್ತ ಬೆನ್ನತ್ತಿದ ಮುಂಬೈ ತಂಡಕ್ಕೆ ಆರಂಭಿಕರಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿ ಕಾಕ್ ಬಿರುಸಿನ ಆರಂಭವೊದಗಿಸಿದರು. ಪವರ್ ಪ್ಲೇ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 56 ರನ್ ಗಳಿಸಿತ್ತು. 

ಮುಂಬೈ ಗೆಲುವಿಗೆ 166 ರನ್‌ಗಳ ಗುರಿ ಒಡ್ಡಿದ ಬೆಂಗಳೂರು

ಐಪಿಎಲ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ (56) ಬಿರುಸಿನ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 165 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ. 

ಡಬಲ್ ಆಘಾತ ನೀಡಿದ ಬೂಮ್ರಾ

33 ಎಸೆತಗಳಲ್ಲಿ ಮ್ಯಾಕ್ಸ್‌ವೆಲ್ ಫಿಫ್ಟಿ

ಕೊಹ್ಲಿ ವಿಕೆಟ್ ಪತನ

ಫಿಫ್ಟಿ ಬೆನ್ನಲ್ಲೇ ವಿರಾಟ್ ಕೊಹ್ಲಿ ವಿಕೆಟ್ ನಷ್ಟವಾಯಿತು. 42 ಎಸೆತಗಳನ್ನು ಎದುರಿಸಿದ ಕೊಹ್ಲಿ ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 51 ರನ್ ಗಳಿಸಿದರು. 

ಐಪಿಎಲ್‌ನಲ್ಲಿ 42 ನೇ ಅರ್ಧಶತಕ ಬಾರಿಸಿದ ಕೊಹ್ಲಿ

ಅತ್ತ ನಾಯಕನ ಇನ್ನಿಂಗ್ಸ್ ಕಟ್ಟಿದ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಾಧನೆ ಮಾಡಿದರು. ಇವರಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಉತ್ತಮ ಸಾಥ್ ನೀಡಿದರು. 15 ಓವರ್ ಅಂತ್ಯಕ್ಕೆ ಆರ್‌ಸಿಬಿ ಸ್ಕೋರ್ 119/2

ಭರತ್ ನಿರ್ಗಮನ

10 ಓವರ್ ಅಂತ್ಯಕ್ಕೆ ಆರ್‌ಸಿಬಿ 82/2

ಉತ್ತಮವಾಗಿ ಆಡುತ್ತಿದ್ದ ಶ್ರೀಕರ್ ಭರತ್ ವಿಕೆಟ್ ಆರ್‌ಸಿಬಿಗೆ ನಷ್ಟವಾಯಿತು. ಇದರೊಂದಿಗೆ ನಾಯಕ ಕೊಹ್ಲಿ ಜೊತೆಗಿನ 68 ರನ್‌ಗಳ ಜೊತೆಯಾಟವು ಮುರಿದು ಬಿತ್ತು. 24 ಎಸೆತಗಳನ್ನು ಎದುರಿಸಿದ ಭರತ್ ತಲಾ ಎರಡು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 32 ರನ್ ಗಳಿಸಿದರು. 

10 ಓವರ್ ಅಂತ್ಯಕ್ಕೆ ಆರ್‌ಸಿಬಿ ಎರಡು ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿತ್ತು. 

ಕೊಹ್ಲಿ-ಭರತ್ ಫಿಫ್ಟಿ ಜೊತೆಯಾಟ

ಖಾತೆ ತೆರೆಯುವ ಮುನ್ನವೇ ಪಡಿಕ್ಕಲ್ ಔಟ್

ಆರ್‌ಸಿಬಿಗೆ ನಾಯಕ ಕೊಹ್ಲಿ, ಭರತ್ ಆಸರೆ

ಜಸ್‌ಪ್ರೀತ್ ಬೂಮ್ರಾ ಎಸೆದ ಮೊದಲ ಓವರ್‌ನಲ್ಲೇ ಔಟ್ ಆದ ದೇವದತ್ತ ಪಡಿಕ್ಕಲ್ ಖಾತೆ ತೆರೆಯಲಾಗದೇ ಪೆವಿಲಿಯನ್‌ಗೆ ಮರಳಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಹಾಗೂ ಶ್ರೀಕರ್ ಭರತ್ ತಂಡವನ್ನು ಮುನ್ನಡೆಸಿದರು. 

ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಕೊಹ್ಲಿ ಗಮನ ಸೆಳೆದರು. ಪವರ್ ಪ್ಲೇ ಅಂತ್ಯಕ್ಕೆ ಆರ್‌ಸಿಬಿ ಒಂದು ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತ್ತು. 

ಆರ್‌ಸಿಬಿ ತಂಡದಲ್ಲಿ ಮೂರು ಬದಲಾವಣೆ

ಟಾಸ್ ಝಲಕ್

ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಫೀಲ್ಡಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. 

ಮುಂಬೈ ವಿರುದ್ಧ ಹೈವೋಲ್ಟೇಜ್ ಪಂದ್ಯ

ಕೊಹ್ಲಿ vs ರೋಹಿತ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.