ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 6 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ-ಆಫ್ ಹಂತಕ್ಕೆ ಪ್ರವೇಶಿಸಿದೆ.
ಈ ಮೂಲಕ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದ ಮೂರನೇ ತಂಡವೆನಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ, ಗ್ಲೆನ್ ಮ್ಯಾಕ್ಸ್‌ವೆಲ್ ಬಿರುಸಿನ ಅರ್ಧಶತಕದ (57) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.
ಬಳಿಕ ಗುರಿ ಬೆನ್ನತ್ತಿದ ಪಂಜಾಬ್, ಮಯಂಕ್ ಅಗರವಾಲ್ ಅರ್ಧಶತಕದ (57) ಹೊರತಾಗಿಯೂ ಆರು ವಿಕೆಟ್ ನಷ್ಟಕ್ಕೆ 158 ರನ್ ಗಳಿಸಲಷ್ಟೇ ಸಮರ್ಥವಾಯಿತು.
ಆರ್‌ಸಿಬಿ ಪರ ಮೂರು ವಿಕೆಟ್ ಕಬಳಿಸಿದ ಯಜುವೇಂದ್ರ ಚಾಹಲ್, ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಇದರೊಂದಿಗೆ ಪಂಜಾಬ್, ಪ್ಲೇ-ಆಫ್ ಪ್ರವೇಶ ಹಾದಿಯು ಮತ್ತಷ್ಟು ಕಠಿಣವೆನಿಸಿದೆ.
165 ರನ್ ಗುರಿ ಬೆನ್ನತ್ತಿದ ಪಂಜಾಬ್‌ಗೆ ಆರಂಭಿಕರಾದ ನಾಯಕ ಕೆ.ಎಲ್. ರಾಹುಲ್ ಹಾಗೂ ಮಯಂಕ್ ಅಗರವಾಲ್ ಉತ್ತಮ ಆರಂಭವೊದಗಿಸಿದರು. ಪವರ್ ಪ್ಲೇ ಅಂತ್ಯಕ್ಕೆ ಪಂಜಾಬ್ ವಿಕೆಟ್ ನಷ್ಟವಿಲ್ಲದೆ 49 ರನ್ ಗಳಿಸಿತ್ತು.
ಗ್ಲೆನ್ ಮ್ಯಾಕ್ಸ್‌ವೆಲ್ ಬಿರುಸಿನ ಅರ್ಧಶತಕದ (57) ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭಾನುವಾರ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.
ಮ್ಯಾಕ್ಸ್‌ವೆಲ್ ಕೇವಲ 29 ಎಸೆತಗಳಲ್ಲಿ ಫಿಫ್ಟಿ ಸಾಧನೆ ಮಾಡಿದರು. ದೇವದತ್ತ ಪಡಿಕ್ಕಲ್ (40), ನಾಯಕ ವಿರಾಟ್ ಕೊಹ್ಲಿ (25) ಹಾಗೂ ಎಬಿ ಡಿವಿಲಿಯರ್ಸ್ (23) ಉಪಯುಕ್ತ ಇನ್ನಿಂಗ್ಸ್ ಕಟ್ಟಿದರು.
ಪಂಜಾಬ್ ಪರ ಮೊಯಿಸಿಸ್ ಹೆನ್ರಿಕ್ಸ್ ಕೇವಲ 12 ರನ್ ತೆತ್ತು ಮೂರು ವಿಕೆಟ್ ಕಬಳಿಸಿ ಮಿಂಚಿದರು.
10 ಓವರ್ ಅಂತ್ಯಕ್ಕೆ ಆರ್‌ಸಿಬಿ ಎರಡು ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿತ್ತು. ನಾಯಕ ವಿರಾಟ್ ಕೊಹ್ಲಿ (25) ಹಾಗೂ ದೇವದತ್ತ ಪಡಿಕ್ಕಲ್ (38*) ಮೊದಲ ವಿಕೆಟ್‌ಗೆ 68 ರನ್‌ಗಳ ಜೊತೆಯಾಟ ನೀಡಿದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆರ್‌ಸಿಬಿ ತಂಡಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಆರಂಭವೊದಗಿಸಿದರು. ಪವರ್ ಪ್ಲೇ ಅಂತ್ಯಕ್ಕೆ ಆರ್‌ಸಿಬಿ ವಿಕೆಟ್ ನಷ್ಟವಿಲ್ಲದೆ 55 ರನ್ ಗಳಿಸಿತ್ತು. ನಾಯಕ ವಿರಾಟ್ ಕೊಹ್ಲಿ (18*) ಹಾಗೂ ದೇವದತ್ತ ಪಡಿಕ್ಕಲ್ (34*) ಕ್ರೀಸಿನಲ್ಲಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.