ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಅಭ್ಯಾಸದ ಅವಧಿಯ ವೇಳೆ ಅದ್ಭುತ ಯಾರ್ಕರ್ ಎಸೆದಿರುವ ಯುವ ಎಡಗೈ ವೇಗದ ಬೌಲರ್ ಅರ್ಜುನ್ ತೆಂಡೂಲ್ಕರ್ ಗಮನ ಸೆಳೆದಿದ್ದಾರೆ.
ಈ ಮೂಲಕ ತಾವು ಐಪಿಎಲ್ ಆಡಲು ತಯಾರು ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಎಡಗೈ ಬ್ಯಾಟರ್ ಅನ್ನು ಯಾರ್ಕರ್ ಹಾಕಿ ಅರ್ಜುನ್ ತೆಂಡೂಲ್ಕರ್ ಕ್ಲೀನ್ ಬೌಲ್ಡ್ ಮಾಡಿದ್ದಾರೆ.
ಪ್ರಸ್ತುತ ವಿಡಿಯೊವನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸ್ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಸತತ ಆರನೇ ಸೋಲಿನ ಮುಖಭಂಗಕ್ಕೊಳಗಾಗಿರುವ ಮುಂಬೈ, ಮೊದಲ ಗೆಲುವಿನ ಹುಡುಕಾಟದಲ್ಲಿದೆ.
ಈ ಹಿನ್ನೆಲೆಯಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ. ರೋಹಿತ್ ಶರ್ಮಾ ಬಳಗವು ಇಂದು (ಗುರುವಾರ) ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸವಾಲನ್ನು ಎದುರಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.