ADVERTISEMENT

IPL 2022: ಮುಂಬೈ ತಂಡಕ್ಕೆ ಮರಳಿದ ಸ್ಟಾರ್ ಆಟಗಾರ

ಐಎಎನ್ಎಸ್
Published 31 ಮಾರ್ಚ್ 2022, 14:07 IST
Last Updated 31 ಮಾರ್ಚ್ 2022, 14:07 IST
ಸೂರ್ಯಕುಮಾರ್ ಯಾದವ್
ಸೂರ್ಯಕುಮಾರ್ ಯಾದವ್   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಸಂಪೂರ್ಣ ಫಿಟ್‌ನೆಸ್ ಮರಳಿ ಪಡೆದಿದ್ದು, ತಂಡವನ್ನು ಸೇರಿಕೊಂಡಿದ್ದಾರೆ.

ಐಪಿಎಲ್ ನಿಯಮಾವಳಿಗೆ ಅನುಸಾರವಾಗಿ ಸೂರ್ಯಕುಮಾರ್, ಕಡ್ಡಾಯ ಕ್ವಾರಂಟೈನ್ ಅವಧಿಯನ್ನು ಮುಗಿಸಿದ ಬಳಿಕ ಮುಂಬೈ ಇಂಡಿಯನ್ಸ್ ಬಯೋಬಬಲ್ ಅನ್ನು ಸೇರ್ಪಡೆಗೊಂಡಿದ್ದಾರೆ.

ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯಲಿರುವ ಪಂದ್ಯಕ್ಕೆ ಸೂರ್ಯಕುಮಾರ್ ಲಭ್ಯರಾಗುವ ನಿರೀಕ್ಷೆಯಿದೆ. ಈ ಮೂಲಕ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬಲಿದ್ದಾರೆ.

ಸೂರ್ಯಕುಮಾರ್, ಫೆಬ್ರುವರಿ 20ರಂದು ವೆ‌ಸ್ಟ್‌ ಇಂಡೀಸ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಬೆರಳಿಗೆ ಗಾಯಮಾಡಿಕೊಂಡಿದ್ದರು.

ಗಾಯದಿಂದ ಚೇತರಿಸಿಕೊಂಡ ಬಳಿಕ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲಿಗೆ ಶರಣಾಗಿತ್ತು. ಈ ಪಂದ್ಯದಲ್ಲಿ ಸೂರ್ಯಕುಮಾರ್ ಅನುಪಸ್ಥಿತಿ ಕಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.