ADVERTISEMENT

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌; ಡಿಆರ್‌ಎಸ್ ಅಲಭ್ಯ; ಕಾನ್ವೆ ಔಟ್ ಅಥವಾ ನಾಟೌಟ್?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಮೇ 2022, 15:55 IST
Last Updated 12 ಮೇ 2022, 15:55 IST
ಟ್ವಿಟರ್ ಚಿತ್ರ
ಟ್ವಿಟರ್ ಚಿತ್ರ   

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರವಾರ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯಕ್ಕೆವಿದ್ಯುತ್‌ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಅಡಚಣೆ ಎದುರಾಗಿತ್ತು.

ಇದರಿಂದಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ತಂತ್ರಜ್ಞಾನ ಬಳಕೆಗೆ ಲಭ್ಯವಾಗಿರಲಿಲ್ಲ. ಅಲ್ಲದೆ ಸಿಎಸ್‌ಕೆ ಆರಂಭಿಕ ಬ್ಯಾಟರ್ ಡೆವೊನ್ ಕಾನ್ವೆ ವಿವಾದಾತ್ಮಕ ತೀರ್ಪಿಗೆ ಔಟ್ ಆಗಿದ್ದರು. ಇದು ಚೆನ್ನೈ ತಂಡದ ಹಿನ್ನಡೆಗೆ ಕಾರಣವಾಗಿತ್ತು.

ಹೊನಲು ಬೆಳಕಿನ ಟವರ್‌ನಲ್ಲಿ ತಾಂತ್ರಿಕ ದೋಷದಿಂದಾಗಿಟಾಸ್ ಎರಡು ನಿಮಿಷಗಳಷ್ಟು ವಿಳಂಬವಾಗಿತ್ತು. ಬಳಿಕ ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ಮೊದಲು ಫೀಲ್ಡಿಂಗ್ ಆಯ್ದುಕೊಂಡರು.

ADVERTISEMENT

ಡ್ಯಾನಿಯಲ್ ಸ್ಯಾಮ್ಸ್ ಎಸೆದ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲೇ ಕಾನ್ವೆ ಅವರನ್ನು ಎಲ್‌ಬಿಡಬ್ಲ್ಯು ಬಲೆಗೆ ಸಿಲುಕಿಸಿದರು. ಮನವಿ ಪುರಸ್ಕರಿಸಿದ ಅಂಪೈರ್ ಔಟ್ ತೀರ್ಪು ನೀಡಿದರು.

ಆದರೆ ವಿದ್ಯುತ್‌ಶಾರ್ಟ್‌ಸರ್ಕ್ಯೂಟ್‌ನಿಂದ ಡಿಆರ್‌ಎಸ್ ತಂತ್ರಜ್ಞಾನದ ಅಲಭ್ಯತೆ ಕಾಡಿದ್ದರಿಂದ ಕಾನ್ವೆಗೆ ಮೇಲ್ಮನವಿ ಮಾಡಲು ಸಾಧ್ಯವಾಗಲಿಲ್ಲ. ಅಲ್ಲದೆ ಪೆವಿಲಿಯನ್‌ನತ್ತ ಹೆಜ್ಜೆ ಹಾಕಬೇಕಾಯಿತು. ಆದರೆ ನಿಜಕ್ಕೂ ಇದು ಔಟ್ ಆಗಿತ್ತೆ ಎಂಬ ಅನುಮಾನ ಕಾಡಿದೆ.

ಈ ಕುರಿತು ಅಭಿಮಾನಿಗಳು ಟ್ವಿಟರ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ. 'No DRS' ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗಿದ್ದು, ವಿಶ್ವದ ಶ್ರೀಮಂತ ಲೀಗ್‌ನಲ್ಲಿ ವಿದ್ಯುತ್ ಅಡಚಣೆ ಉಂಟಾಗಿರುವುದು ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.