ADVERTISEMENT

IPL 2022 DC vs KKR: ಶ್ರೇಯಸ್–ರಿಷಭ್ ಮುಖಾಮುಖಿ ಇಂದು

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 19:31 IST
Last Updated 9 ಏಪ್ರಿಲ್ 2022, 19:31 IST
ರಿಷಭ್ ಪಂತ್ ಮತ್ತು ಖಲೀಲ್ ಅಹಮದ್
ರಿಷಭ್ ಪಂತ್ ಮತ್ತು ಖಲೀಲ್ ಅಹಮದ್   

ಮುಂಬೈ: ಪಾಯಿಂಟ್ ಪಟ್ಟಿಯ ಅಗ್ರಸ್ಥಾನದಲ್ಲಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಭಾನುವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರಿಸಲಿದೆ.

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತ ತಂಡವು ನಾಲ್ಕು ಪಂದ್ಯಗಳನ್ನಾಡಿ, ಮೂರರಲ್ಲಿ ಜಯಿಸಿದೆ. ಆಲ್‌ರೌಂಡರ್ ಆ್ಯಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುನೀಲ್ ನಾರಾಯಣ ಈ ತಂಡದ ಪ್ರಮುಖ ಶಕ್ತಿಯಾಗಿದ್ಧಾರೆ. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ತಂಡವು ಮೂರು ಪಂದ್ಯಗಳನ್ನಾಡಿ ಎರಡರಲ್ಲಿ ಸೋತು ಒಂದು ಗೆದ್ದಿದೆ. ತಂಡದ ಬ್ಯಾಟರ್ ಪೃಥ್ವಿ ಶಾ, ರಿಷಭ್, ಸರ್ಫರಾಜ್ ಖಾನ್ ಉತ್ತಮ ಲಯದಲ್ಲಿದ್ಧಾರೆ. ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀ‍ಪ್ ಯಾದವ್ ಮತ್ತು ಮುಸ್ತಫಿಜುರ್ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬೌಲಿಂಗ್ ಮಾಡಿದರೆ ತಂಡದ ಜಯದ ಹಾದಿ ನಿಚ್ಚಳವಾಗುವುದು.

ಪಂದ್ಯ ಆರಂಭ: ಮಧ್ಯಾಹ್ನ 3.30

ADVERTISEMENT

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಹಾಟ್‌ಸ್ಟಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.